ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪಿಸದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ

0
43

ಸುರಪುರ: ಈ ದೇಶಕ್ಕೆ ಸ್ವಾತಂತ್ರ್ಯ ದೊರೆಯಬೇಕೆಂದು ಮೊದಲು ಧ್ವನಿ ಎತ್ತಿದ ಕ್ರಾಂತಿ ಪುರುಷ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ತೆರವುಗೊಳಿಸಿರುವುದು ಇಡೀ ಸ್ವಾತಂತ್ರ್ಯ ಸೇನಾನಿಗಳಿಗೆ ಮಾಡಿದ ಅವಮಾನವಾಗಿದೆ.ಕೂಡಲೆ ರಾಯಣ್ಣನ ಮೂರ್ತಿ ಪ್ರತಿಷ್ಠಾಪಿಸಬೇಕು ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಯುವ ಘಟಕದ ಜಿಲ್ಲಾಧ್ಯಕ್ಷ ಮಲ್ಲು ದಂಡಿನ್ ಆಕ್ರೋಶ ವ್ಯಕ್ತಪಡಿಸಿದರು.

ನಗರದ ತಹಸೀಲ್ ಕಚೇರಿ ಮುಂದೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ,ಬೆಳಗಾವಿ ಜಿಲ್ಲೆಯ ಪೀರನವಾಡಿಯಲ್ಲಿ ಇದ್ದ ಕ್ರಾಂತಿವಿರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಆ ಮಹಾಪುರಷನ ಜನುಮ ದಿನವಾದ ಆಗಸ್ಟ್ ೧೫ ರಂದೇ ತೆರವುಗೊಳಿಸುವ ಮೂಲಕ ರಾಯಣ್ಣನವರಿಗೆ ಅವಮಾನಿಸಿರುವುದಲ್ಲದೆ ನಮ್ಮ ಭಾವನೆಗಳಿಗೆ ಧಕ್ಕೆ ಮಾಡಿದ್ದಾರೆ.

Contact Your\'s Advertisement; 9902492681

ಇದರಿಂದ ಇಡೀ ರಾಜ್ಯದಲ್ಲಿ ಮೂರ್ತಿ ಪ್ರತಿಷ್ಠಾಪನೆಗಾಗಿ ಉಗ್ರ ಹೊರಾಟ ನಡೆಸಬೇಕಾಗಲಿದೆ. ಮುಖ್ಯಮಂತ್ರಿಗಳಲ್ಲಿ ವಿನಂತಿಸುತ್ತೇವೆ ಕೂಡಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನವರ ಮೂರ್ತಿ ಪ್ರತಿಷ್ಠಾಪಿಸಬೇಕು ಮತ್ತು ಮೂರ್ತಿ ತೆರವಿಗೆ ಕಾರಣವಾದ ಅಧಿಕಾರಿಗಳನ್ನು ಕೆಲಸದಿಮದ ತೆಗೆದೊಗೆಯಬೇಕು ಮತ್ತು ಇದರ ಹಿಂದೆ ಇರುವ ಪ್ರಭಾವಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುವುದಾಗಿ ತಿಳಿಸಿದರು.

ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ತಹಸೀಲ್ ಸಿರಸ್ತೆದಾರ ಸೋಮನಾಥ ನಾಯಕ ಮೂಲಕ ಸಲ್ಲಿಸಿಲಾಯಿತು.ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಚಂದ್ರು ಯಲಿಗಾರ ಕೃಷ್ಣಾ ಬಾದ್ಯಾಪುರ ಮಾರ್ಥಂಡ ಬಾದ್ಯಾಪುರ ವಾಸು ಕೆಂಗುರಿ ಸಿದ್ರಾಮ ಎಲಿಗಾರ ಮಹಾರಾಜ ಬಬಲಾದಿ ವೆಂಕಿ ಕೊಳ್ಳಿ ಚನ್ನಪ್ಪ ಎಲಿಗಾರ ಶಿವು ಕವಡಿಮಟ್ಟಿ ಸೇರಿದಂತೆ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here