ಕಲಬುರಗಿ: ಬೀದಿ ನಾಯಿಗಳು ಗುಂಪಾಗಿ ದಾಳಿ ನಡೆಸಿದ ಪರಿಣಾಮ ಯುವಕನೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ವಾಡಿ ಪಟ್ಟಣದ ಬಸವೇಶ್ವರ ವೃತ್ತದ ಬಳಿ ಸಂಭವಿಸಿದೆ.
ಬೆಳ್ಳಂಬೆಳಗ್ಗೆ ಓದುಗರ ಮನೆಗಳಿಗೆ ದಿನಪತ್ರಿಕೆ ವಿತರಿಸಲು ಹೊರಟಿದ್ದ ಯುವಕ ಮನೋಜಕುಮಾರ (೧೭) ಮೇಲೆ ಏಕಾಏಕಿ ದಾಳಿ ನಡೆಸಿರುವ ಬೀದಿ ನಾಯಿಗಳ ಹಿಂಡು, ಕಾಲಿಗೆ ಕಚ್ಚಿ ರಕ್ತಗಾಯಗೊಳಿಸಿವೆ. ಸ್ಥಳೀಯ ಸರಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗಾಯಳುಗೆ ಚಿಕಿತ್ಸೆ ಕೊಡಿಸಲಾಗಿದೆ.
ನಗರದ ವಿವಿಧ ಬಡಾವಣೆಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರ ನೆಮ್ಮದಿಗೆ ಭಂಗ ಉಂಟಾಗಿದೆ. ಪಾದಚಾರಿಗಳನ್ನು ದುರುಗುಟ್ಟಿ ನೋಡುತ್ತಾ ಬೀದಿಗಳಲ್ಲಿ ಕುಳಿತ ನಾಯಿಗಳ ಗುಂಪು ಕಂಡು ಸಾರ್ವಜನಿಕರು ಭಯಪಡುವಂತಾಗಿದೆ. ಮಾಂಸ ವ್ಯಾಪಾರಿಗಳು ಬೀದಿಗಳಲ್ಲಿ ಹರಡುತ್ತಿರುವ ಮಾಂಸ ತ್ಯಾಜ್ಯದ ರುಚಿ ಕಂಡಿರುವ ಕ್ರೂರಿ ನಾಯಿಗಳು ಜನರ ಮೇಲೆ ಎರಗುತ್ತಿವೆ.
ಇವಗಳನ್ನು ನಿಯಂತ್ರಿಸಬೇಕಾದ ಪುರಸಭೆ ಅಧಿಕಾರಿಗಳು ಮಾತ್ರ ಮೌನವಾಗಿದ್ದಾರೆ ಎಂದು ನಗರದ ನಿವಾಸಿಗಳು ದೂರಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…