ಕಲಬುರಗಿ: ಜಿಲ್ಲಾ ಪಂಚಾಯತಿಯ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಮಾದನಹಿಪ್ಪರಗಾ ಮತಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾದ ಗುರುಶಾಂತ ಎಸ್. ಪಾಟೀಲ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ಕೃಷಿ, ಪಶುಸಂಗೋಪನೆ, ಮೀನುಗಾರಿಕೆ, ತೋಟಗಾರಿಕೆ, ರೇಷ್ಮೆ, ಕೈಗಾರಿಕಾ, ಸಹಕಾರ, ಎಪಿಎಂಸಿ ಹಾಗೂ ಕೆಎಂಎಫ್ ಇಲಾಖೆಗಳು ಈ ಸಮಿತಿಯ ವ್ಯಾಪ್ತಿಗೆ ಬರುತ್ತವೆ.
ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಾಲಾಜಿ, ಜಿಲ್ಲಾ ಪಂಚಾಯತ ಸದಸ್ಯರಾದ ಹರ್ಷಾನಂದ ಗುತ್ತೇದಾರ ಹಾಗೂ ಜಿಲ್ಲಾ ಪಂಚಾಯತ ಸದಸ್ಯರುಗಳು, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರತೇಂದ್ರನಾಥ ಸುಗೂರ ಹಾಗೂ ಈ ಸಮಿತಿಯ ವ್ಯಾಪ್ತಿಯ ಎಲ್ಲಾ ಇಲಾಖೆಯ ಜಿಲ್ಲಾ ಮಟ್ಟದ ಮುಖ್ಯಸ್ಥರು ಉಪಸ್ಥಿತರಿದ್ದರು.