ಕಲಬುರಗಿ: ಲೋಕಸಭಾ ಸದಸ್ಯರಾದ ಡಾ. ಉಮೇಶ ಜಾಧವ ಅವರು ನಾಗನಹಳ್ಳಿ ಗ್ರಾಮದಲ್ಲಿ ಶನಿವಾರ ಬೆಳೆ ಸಮೀಕ್ಷೆ ಮಾಹಿತಿಯ ಸಂಚಾರಿ ವಾಹನಕ್ಕೆ ಚಾಲನೆ ನೀಡಿದರು. ನಂತರ ಅವರು ಬೆಳೆ ಸಮೀಕ್ಷೆ ಕರಪತ್ರ ಹಾಗೂ ಪೋಸ್ಟರ್‍ಗಳನ್ನು ಬಿಡುಗಡೆ ಮಾಡಿದರು.
ನಂತರ ಅವರು ಮಾತನಾಡಿ, ಎಲ್ಲಾ ಗ್ರಾಮಗಳಲ್ಲಿ ಬೆಳೆ ಸಮೀಕ್ಷೆ ಕುರಿತು ಕರಪತ್ರ, ಪೆÇೀಸ್ಟರ್ ಮುದ್ರಿಸಿ ರೈತರಿಗೆ ವಿತರಿಸುವ ಮೂಲಕ 2020-21 ನೇ ಸಾಲಿನ ಬೆಳೆ ಸಮೀಕ್ಷೆ ವಿನೂತನ ಯೋಜನೆಯ ಬಗ್ಗೆ ಜಿಲ್ಲೆಯ ರೈತರಿಗೆ ವ್ಯಾಪಕವಾದ ಮಾಹಿತಿ ನೀಡಬೇಕು. ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಮೇತ ಅಪ್‍ಲೋಡ್ ಮಾಡುವುದರ ಬಗ್ಗೆ ರೈತರಿಗೆ ತಿಳಿಸಬೇಕು ಎಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಎಲ್ಲಾ ಸ್ಥಳಿಯ ಜನಪ್ರತಿನಿಧಿಗಳು ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಈ ಕುರಿತು ಮಾಹಿತಿ ನೀಡಬೇಕೆಂದರು.
ವಿಧಾನ ಪರಿಷತ್ ಶಾಸಕರಾದ ಬಿ.ಜಿ.ಪಾಟೀಲ್ ಅವರು ಮಾತನಾಡಿ, ಬೆಳೆ ಸಮೀಕ್ಷೆ ಯೋಜನೆ ಸರ್ಕಾರದ ಒಂದು ಒಳ್ಳೆಯ ಕಾರ್ಯಕ್ರಮವಾಗಿದೆ. ಎಲ್ಲಾ ರೈತಭಾಂದವರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಕಲಬುರಗಿ ಜಂಟಿ ಕೃಷಿ ನಿರ್ದೇಶಕ ಡಾ. ರಿತೇಂದ್ರನಾಥ ಸೂಗುರ ಮಾತನಾಡಿ, ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ವಿವರಗಳನ್ನು 2020ರ ಆಗಸ್ಟ್ 11 ರಿಂದ 24 ರವರೆಗೆ ಅಪ್‍ಲೋಡ್ ಮಾಡಲು ಕಾಲಾವಧಿಯನ್ನು ನಿಗದಿಪಡಿಸಲಾಗಿದೆ. ರೈತರು ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಸಹಾಯಕ ತೋಟಗಾರಿಕೆ ಅಧಿಕಾರಿ ಹಾಗೂ ರೇμÉ್ಮ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬೇಕೆಂದರು.
ನಿಗದಿತ ಸಮಯದೊಳಗೆ ಬೆಳೆಯ ಮಾಹಿತಿಯನ್ನು ಅಪ್‍ಲೋಡ್ ಮಾಡದೇ ಇದ್ದ ಪಕ್ಷದಲ್ಲಿ ಖಾಸಗಿ ನಿವಾಸಿಗಳ ಸಹಾಯದಿಂದ ತಮ್ಮ ಜಮೀನುಗಳ ಬೆಳೆ ಮಾಹಿತಿಯನ್ನು ಛಾಯಾಚಿತ್ರದೊಂದಿಗೆ ಬೆಳೆ ಸಮೀಕ್ಷೆ ಆ್ಯಪ್‍ನಲ್ಲಿ ಬೆಳೆ ಸಮೀಕ್ಷೆ ಕಾಲಾವಧಿಯನ್ನು 2020ರ ಆಗಸ್ಟ್ 24 ಮುಕ್ತಾಯವಾದ ನಂತರ ಅಪ್‍ಲೋಡ್ ಮಾಡಲಾಗುತ್ತದೆ ಎಂದರು.
ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ ಮತ್ತು ವಿಧಾನ ಪರಿಷತ್ ಶಾಸಕರಾದ ಬಿ.ಜಿ.ಪಾಟೀಲ ಅವರು ನಾಗನಹಳ್ಳಿ ಗ್ರಾಮದ ರೈತ ಶಿವಶರಣಪ್ಪಾ ಈರಪ್ಪಾ ಗಚ್ಚಿಮನಿ ಅವರ ಸರ್ವೇ ನಂಬರ್ 69 ಹೊಲಕ್ಕೆ ತೆರಳಿ, ಖುದ್ದು ವೀಕ್ಷಣೆ ನಡೆಸಿ, ಬೆಳೆ ಸಮೀಕ್ಷೆ ಯೋಜನೆಯ ಮಾಹಿತಿ ಪಡೆದರು.
ನಾಗನಹಳ್ಳಿ ಗ್ರಾಮದ ರೈತ ಶಿವಶರಣಪ್ಪಾ ಈರಪ್ಪಾ ಗಚ್ಚಿಮನಿ ಅವರು ತಮ್ಮ ಮೊಬೈಲ್‍ನಲ್ಲಿ ಬೆಳೆ ವಿಮೆ ಸಮೀಕ್ಷೆ ಆ್ಯಪ್‍ನ್ನು ಡೌನ್‍ಲೋಡ್ ಮಾಡಿಕೊಂಡು ಇತರ ಸಹಾಯದಿಂದ ತಮ್ಮ ಜಮೀನಿನಲ್ಲಿ ಬೆಳೆದ ಮಾಹಿತಿಯನ್ನು ಛಾಯಾಚಿತ್ರ ಸಹಿತ ಅಪ್‍ಪೋಡ್ ಮಾಡುವುದನ್ನು ಕಲಬುರಗಿ ಲೋಕಸಭಾ ಸಂಸದರು ಖುದ್ದಾಗಿ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಉಪ ಕೃಷಿ ನಿರ್ದೇಶಕರಾದ ಅನುಸೂಯಾ ಹೂಗಾರ, ಸಹಾಯಕ ಕೃಷಿ ನಿರ್ದೇಶಕ ಚಂದ್ರಕಾಂತ ಜಿವಣಗಿ, ಕೃಷಿ ಇಲಾಖಾ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ನಾಗನಹಳ್ಳಿ ಗ್ರಾಮದ ರೈತರು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…