ಬಿಸಿ ಬಿಸಿ ಸುದ್ದಿ

ಗಣೇಶ ಚತುರ್ಥಿ ಆಚರಣೆಗೆ ರಾಜ್ಯ ಸರಕಾರ ಮಾರ್ಗ ಸೂಚಿ ಬಿಡುಗಡೆ

ಬೆಂಗಳೂರು: ಕೋವಿಡ್‌–19 ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಗಣೇಶೋತ್ಸವ ಆಚರಣೆಗೆ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದೆ. ಗಣೇಶ ಚತುರ್ಥಿ ಹಬ್ಬ ಸರಳ ವಾಗಿ ದೇವಸ್ಥಾನದಲ್ಲಿ, ಮನೆಗಳಲ್ಲಿ ಅಥವಾ ಸರ್ಕಾರಿ, ಖಾಸಗಿ, ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬಹುದು ಎಂದು ಮಾರ್ಗಸೂಚಿಯಲ್ಲಿ ರಾಜ್ಯ ಸರಕಾರ ಅದೇಶ ಹೊರಡಿಸಿ ತಿಳಿಸಿದೆ.

ಗಣೇಶೋತ್ಸವ ಆಚರಿಸಲು ಸರಕಾರದ ಮಾರ್ಗಸೂಚಿ:

ಆಚರಣೆಗಳಲ್ಲಿ ಒಮ್ಮೆಲೆ 20ಕ್ಕಿಂತ ಹೆಚ್ಚಿನ ಜನ ಸೇರದಂತೆ ಗಮನಿಸುವುದು.

ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲಿ ಅಥವಾ ಯಾವುದೇ ಸಂದರ್ಭಗಳಲ್ಲಿ ಯಾವುದೇ ರೀತಿಯ ಮೆರವಣಿಗೆ ಮಾಡುವಂತಿಲ್ಲ. ಅದನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ.

ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ದೇವಸ್ಥಾನದೊಳಗೆ, ಮನೆಗಳಲ್ಲಿ ಅಥವಾ ಸರ್ಕಾರಿ/ ಖಾಸಗಿ / ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬಹುದು.

ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತಹ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದು.

ಸರ್ಕಾರಿ ಅಥವಾ ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಮೂರ್ತಿಗಳನ್ನು ಸಮೀಪದ ಮಾರ್ಗಗಳ ಮೂಲಕ ಮಹಾನಗರ ಪಾಲಿಕೆ ಅಥವಾ ಜಿಲ್ಲಾಡಳಿತ ಅಥವಾ ಹತ್ತಿರದ ಸ್ಥಳೀಯ ಸಂಸ್ಥೆಗಳ ಇಲ್ಲವೇ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ ಅಥವಾ ಟ್ಯಾಂಕ್‌ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕ್‌ಗಳಲ್ಲಿ ವಿಸರ್ಜಿಸುವುದು.

ಗಣೇಶೋತ್ಸವ ಸಮಿತಿಗಳು/ ಮಂಡಳಿಗಳು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಮುನಿಸಿಪಲ್‌ ಕಾರ್ಪೊರೇಷನ್‌ ಅಥವಾ ಸ್ಥಳೀಯ ಆಡಳಿತದಿಂದ ಮುಂಚಿತವಾಗಿ ಅನುಮತಿ ಪಡೆದುಕೊಳ್ಳಬೇಕು. ಒಂದು ವಾರ್ಡ್‌ಗೆ ಅಥವಾ ಒಂದು ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶೋತ್ಸವ ಆಚರಿಸಲು ಪ್ರೋತ್ಸಾಹಿಸುವುದು.

ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು.

ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ/ ಸಂಗೀತ/ ನೃತ್ಯ ಇನ್ನಿತರ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

3 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

3 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

3 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

20 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

22 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago