ಶಹಾಪುರ : ತಾಲ್ಲೂಕಿನ ಸಗರ ಗ್ರಾಮದ ಕಡಗುಡ ಮಠದ ಹತ್ತಿರದರಸ್ತೆ,ಮಳೆ ಹಾಗೂ ಚರಂಡಿ ನೀರಿನಿಂದ ಕೆಸರು ಗದ್ದೆಯಾಗಿದ್ದು ವಾಹನಗಳ ಸಂಚಾರಕ್ಕೆ ಹಾಗೂ ಪಾದಚಾರಿಗಳ ಓಡಾಟಕ್ಕೆ ತೀವ್ರ ತೊಂದರೆಯಾಗುತ್ತಿದೆ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಇತ್ತ ಗಮನಹರಿಸಿ ಈ ರಸ್ತೆ ದುರಸ್ತಿಗೊಳಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಜೆ.ಡಿ.ಎಸ್ ಯುವ ಮುಖಂಡರಾದ ದೇವೇಂದ್ರಪ್ಪ ಬಸ್ಸಾನವರ ಒತ್ತಾಯಿಸಿದ್ದಾರೆ.
ಹಲವಾರು ಬಾರಿ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನೆಯಾಗಿಲ್ಲ ಚರಂಡಿಯ ನೀರು ರಸ್ತೆಯ ಮೇಲೆ ಹರಿಯುತ್ತಿರುವುದರಿಂದ ವಾಹನ ಸವಾರರಿಗೆ ಹಾಗೂ ಪಾದಚಾರಿಗಳಿಗೆ ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ ಇದರ ಅಕ್ಕಪಕ್ಕದಲ್ಲಿ ಮಠ ಹಾಗೂ ಶಾಲೆಗಳು ಇವೆ.ಸೊಳ್ಳೆ ಕಾಟ ಜಾಸ್ತಿಯಾಗಿರುವುದರಿಂದ ಮಲೇರಿಯಾ ಹಾಗೂ ಇನ್ನಿತರ ರೋಗಗಳಿಗೆ ಸಾರ್ವಜನಿಕರು ತುತ್ತಾಗುವ ಸಂಭವವಿರುವುದರಿಂದ ಜನರು ಭಯದ ವಾತಾವರಣದಲ್ಲಿ ಬದುಕುತ್ತಿದ್ದಾರೆ.
ಗ್ರಾಮದಲ್ಲಿ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ ದಾಖಲೆಗಳಲ್ಲಿ ಮಾತ್ರ ಅಭಿವೃದ್ಧಿ ಮಾಡಿ ಸರಕಾರದ ಹಣ ಲಪಟಾಯಿಸುತ್ತಿದ್ದಾರೆ ಪಂಚಾಯಿತಿ ಅಧಿಕಾರಿಗಳು ಸರ್ವೆ ಮಾಡಿ ಇಂಥ ಪರಿಸ್ಥಿತಿ ನಿರ್ಮಾಣವಾದಲ್ಲಿ ವಾರ್ಡುಗಳಲಿ ದುರಸ್ತಿ ಕಾರ್ಯ ಕೈಗೊಂಡು ಸ್ವಚ್ಛತೆ ಕಾಪಾಡುವುದು ಪಂಚಾಯಿತಿ ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ಸಾರ್ವಜನಿಕರು ಮನವಿ ಮಾಡಿಕೊಂಡಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…