ಕಲಬುರಗಿ: ಸೇಡಂ ತಾಲೂಕಿನ ಮಳಖೇಡ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ೨೦೧೯-೨೦ ನೇ ಸಾಲಿನಲ್ಲಿ ಖಾಲಿಯಿರುವ ಇಂಗ್ಲೀಷ್-01 ಹಾಗೂ ವಿಜ್ಞಾನ (ಸಿಬಿಝಡ್) ವಿಷಯ-01 ವಿಷಯ ಸೇರಿದಂತೆ ಎರಡು ಹುದ್ದೆಗಳನ್ನು ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರ ನೇಮಕಾತಿಗಾಗಿ 2019ರ ಜೂನ್ 3 ರಂದು ಸಂದರ್ಶನ ನಡೆಯಲಿದೆ ಎಂದು ಮಳಖೇಡ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.
ಇಂಗ್ಲೀಷ್ ವಿಷಯದ ಶಿಕ್ಷಕರ ಹುದ್ದೆಗೆ ಇಂಗ್ಲೀಷ ಮಾಧ್ಯಮದಲ್ಲಿ ಬಿ.ಎ. ಬಿಇಡಿ (ಬಿ.ಎ.ಯಲ್ಲಿ ಐಚ್ಛಿಕ ವಿಷಯ ಇಂಗ್ಲೀಷ) ಪಾಸಾಗಿರಬೇಕು. ವಿಜ್ಞಾನ ವಿಷಯದ ಶಿಕ್ಷಕರ ಹುದ್ದೆಗೆ ಇಂಗ್ಲೀಷ ಮಾಧ್ಯಮದಲ್ಲಿ ಬಿ.ಎಸ್ಸಿ.,ಬಿ.ಎಡ್. (ಸಿ.ಬಿ.ಝಡ್.) ವಿದ್ಯಾರ್ಹತೆ ಹೊಂದಿರಬೇಕು. ಪ್ರತಿ ಮಾಹೆ 10,000 ರೂ.ಗಳ ಗೌರವಧನ ನೀಡಲಾಗುತ್ತದೆ.
ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ಮೇಲ್ಕಂಡ ದಿನಾಂಕದಂದು ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಮಳಖೇಡ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಹಾಗೂ ಮೊಬೈಲ್ ಸಂಖ್ಯೆ: 9916689952ಗೆ ಸಂಪರ್ಕಿಸಬೇಕೆಂದು ಮಳಖೇಡ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…