ಕೊರೋನಾ ಸೋಂಕಿನಿಂದ ಮತ್ತಿಬ್ಬರು ನಿಧನ

0
70

ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಇಬ್ಬರು ನಿಧನವಾಗಿರುವ ಬಗ್ಗೆ ಮಂಗಳವಾರ ವರದಿಯಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 172ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದರು.

ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ 57 ವರ್ಷದ ಪುರುಷ (P-186106) ಆ.5 ರಂದು ಆಸ್ಪತ್ರೆಗೆ ದಾಖಲಾಗಿ ಆ.16 ರಂದು ನಿಧನರಾಗಿದ್ದಾರೆ.

Contact Your\'s Advertisement; 9902492681

ಐ.ಎಲ್.ಐ. ಹಿನ್ನೆಲೆ ಜೊತೆಗೆ ಮಧುಮೇಹದಿಂದ ಬಳಲುತ್ತಿದ್ದ ಕಲಬುರಗಿ ಎಂ.ಆರ್.ಎಂ.ಸಿ‌ ಆಸ್ಪತ್ರೆ ಎದುರುಗಡೆಯ ಭರತ ನಗರದ 65 ವರ್ಷದ ವೃದ್ಧ (P-242668) ಆ.15 ರಂದು ಆಸ್ಪತ್ರೆಗೆ ದಾಖಲಾಗಿ ಆ.17 ರಂದು ನಿಧನ ಹೊಂದಿದ್ದಾರೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here