ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ನಗರದ ಮೂವರು ನಿಧನವಾಗಿರುವ ಬಗ್ಗೆ ಬುಧವಾರ ವರದಿಯಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 175ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದರು.
ತೀವ್ರ ಉಸಿರಾಟ ತೊಂದರೆ ಜೊತೆಗೆ ಅಧಿಕ ರಕ್ತದೊತ್ತಡ ಹಾಗೂ ನ್ಯುಮೋನಿಯಾ ಸಮಸ್ಯೆಯಿಂದ ಬಳಲುತ್ತಿದ್ದ ಕಲಬುರಗಿಯ ರಾಮನಗರದ 73 ವರ್ಷದ ವೃದ್ಧ (P-213059) ಆ.14 ರಂದು ಆಸ್ಪತ್ರೆಗೆ ದಾಖಲಾಗಿ ಆ.18 ರಂದು ನಿಧನರಾಗಿದ್ದಾರೆ.
ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ ಹಾಗೂ ನ್ಯುಮೋನಿಯಾ ಸಮಸ್ಯೆಯಿಂದ ಬಳಲುತ್ತಿದ್ದ ಕಲಬುರಗಿ ತಾಲೂಕಿನ ಶರಣಸಿರಸಗಿಯ 65 ವರ್ಷದ ವೃದ್ಧ (P-223866) ಆ.14 ರಂದು ಆಸ್ಪತ್ರೆಗೆ ದಾಖಲಾಗಿ ಆ.17 ರಂದು ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ ಹಾಗೂ ನ್ಯುಮೋನಿಯಾ ಸಮಸ್ಯೆಯಿಂದ ಬಳಲುತ್ತಿದ್ದ ಕಲಬುರಗಿ ನಗರದ ಆಳಂದ ಚೆಕ್ ಪೋಸ್ಟ್ ಹತ್ತಿರದ 55 ವರ್ಷದ ಪುರುಷ (P-230000) ಆ.15 ರಂದು ಆಸ್ಪತ್ರೆಗೆ ದಾಖಲಾಗಿ ಆ.17 ರಂದು ನಿಧನ ಹೊಂದಿದ್ದಾರೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…