ಬಿಸಿ ಬಿಸಿ ಸುದ್ದಿ

ಆನ್‌ಲೈನ್ ತರಗತಿಗೆ ವಿದ್ಯಾರ್ಥಿನಿ ಬಲಿ: ಎಐಡಿಎಸ್‌ಒ ಸಂತಾಪ

ವಾಡಿ: ಆನ್‌ಲೈನ್ ತರಗತಿಗೆ ಹಾಜರಾಗಲು ಪೋಷಕರು ಮೋಬಾಯಿಲ್ ಫೋನ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಚಾಮರಾಜನಗರ ಜಿಲ್ಲೆಯ ಸಾಗಡೆ ಗ್ರಾಮದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಆಲ್ ಇಂಡಿಯಾ ಡೆಮಾಕ್ರೇಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‌ಒ) ತೀವ್ರ ಸಂತಾಪ ಸೂಚಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಎಐಡಿಎಸ್‌ಒ ನಗರ ಸಮಿತಿ ಅಧ್ಯಕ್ಷ ಗೌತಮ ಪರತೂರಕರ ಹಾಗೂ ಕಾರ್ಯದರ್ಶಿ ವೆಂಕಟೇಶ ದೇವದುರ್ಗ, ಕೊರೊನಾ ಲಾಕ್‌ಡೌನ್ ಸಮಸ್ಯೆಯು ಅನೇಕ ಭೀಕರ ಸಂಕಷ್ಟಗಳನ್ನು ತಂದಿಟ್ಟಿದೆ. ವಿದ್ಯಾರ್ಥಿಗಳು, ಯುವಜನರು, ರೈತರು, ಕಾರ್ಮಿಕರು, ಮಹಿಳೆಯರು ನಾನಾ ರೀತಿಯ ತೊಂದರೆಗಳಿಗೆ ಒಳಗಾಗಿದ್ದಾರೆ.

ಇನ್ನೂ ಶಾಲೆಗಳಿಗೆ ಬೀಗ ಬಿದ್ದಿದ್ದು, ಆನ್‌ಲೈನ್ ತರಗತಿ ಎಂಬುದು ವಿದ್ಯಾರ್ಥಿಗಳ ಪಾಲಿಗೆ ಉರುಳಾಗಿ ಪರಿಣಮಿಸಿದೆ. ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಬಡ ಪೋಷಕರು ಮಕ್ಕಳಿಗೆ ಮೋಬಾಯಿಲ್ ಕೊಡಿಸಿ ಇಂಟರ್ನೆಟ್ ಸೌಲಭ್ಯ ಒದಗಿಸಿಕೊಡಲು ಸಾಧ್ಯವಾಗದೆ ಕೈಚೆಲ್ಲಿ ಕುಳಿತಿದ್ದಾರೆ. ಇದು ವಿದ್ಯಾರ್ಥಿಗಳ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಮಕ್ಕಳು ಮಾನಸಿಕವಾಗಿ ಒತ್ತಡಕ್ಕೊಳಗಾಗಿರುವುದು ಚಾಮರಾಜನಗರ ಜಿಲ್ಲೆಯ ವಿದ್ಯಾರ್ಥಿನಿ ಹರ್ಷಿತಾ ಆತ್ಮಹತ್ಯೆ ಪ್ರಕರಣವೇ ಸಾಕ್ಷಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸರಕಾರಿ ಪ್ರಾಯೋಜಿತ ಚಂದನ ವಾಹಿನಿಯ ಪಾಠವನ್ನು ಕೇಳಲು ತಮ್ಮ ಮಕ್ಕಳಿಗೆ ಟಿ.ವಿ ಕೊಡಿಸಲು ಅನೇಕ ತಾಯಂದಿರು ಒಡವೆಗಳನ್ನು ಮಾರಿದ್ದಾರೆ. ಆನ್‌ಲೈನ್ ಪಾಠಗಳು ಈ ಮಕ್ಕಳಿಗೆ ತಲುಪದೇ ಶೈಕ್ಷಣಿಕ ಹಿನ್ನೆಡೆಯ ಆತಂಕ ಎದುರಿಸುತ್ತಿದ್ದಾರೆ. ಆಳುವ ಸರಕಾರಗಳ ಇಂಥಹ ನೀತಿಗಳಿಂದಾಗಿ ಹರಪ್ಪನಹಳ್ಳಿಯ ಗಾಯತ್ರಿ ಎಂಬ ಪ್ರತಿಭಾನ್ವಿತೆ ಪರೀಕ್ಷೆಯ ಶುಲ್ಕ ಪಾವತಿಸಲಾಗದೆ ಆತ್ಮಹತ್ಯೆಗೆ ಶರಣಾದಳು.

ಈಗ ಆನ್‌ಲೈನ್ ಮಹಾಮಾರಿಗೆ ಹರ್ಷಿಕಾ ಬಲಿಯಾಗಿದ್ದಾಳೆ. ಇನ್ನೂ ಮುಂದಿನ ದಿನಗಳು ಎಷ್ಟು ಕರಾಳತೆಯಿಂದ ಕೂಡಿವೆಯೋ ಗೊತ್ತಿಲ್ಲ. ಕಾರಣ ಸುಲಿಗೆಕೋರ ಆನ್‌ಲೈನ್ ತರಗತಿಗಳನ್ನು ಕೂಡಲೇ ನಿಲ್ಲಿಸಬೇಕು. ಕೊರೊನಾ ತೀವ್ರತೆ ಕಡಿಮೆಯಾಗುವವರೆಗೂ ಶೈಕ್ಷಣಿಕ ಚಟುವಟಿಕೆಗಳನ್ನು ಪುನಾರಂಭಿಸಬಾರದು. ಮಗಳನ್ನು ಕಳೆದುಕೊಂಡ ಪೋಷಕರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

emedialine

Recent Posts

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

1 hour ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

1 hour ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

3 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

3 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

3 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

4 hours ago