ಕಲಬುರಗಿ: ಕೋವಿಡ್-19ರ ಹಿನ್ನೆಲೆಯಲ್ಲಿ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕಲಬುರಗಿಯಲ್ಲಿ ಖಾಲಿಯಿರುವ 115 ಶುಶ್ರೂಷಕರ ಹುದ್ದೆಗಳನ್ನು ತಾತ್ಕಾಲಿಕವಾಗಿ ಮೂರು ತಿಂಗಳ ಅವಧಿಗಾಗಿ ಅರ್ಹತೆಯ (ಮೇರಿಟ್) ಆಧಾರದ ಮೇಲೆ ಆಯ್ಕೆಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಎಂದು ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.
ಆಯ್ಕೆಗೊಂಡ ಶುಶ್ರೂಷಕರಿಗೆ ತಿಂಗಳಿಗೆ 25000 ರೂ.ಗಳ ಸಂಚಿತ ವೇತನ ನೀಡಲಾಗುವುದು. ಕೋವಿಡ್-19 ಪರಿಸ್ಥಿತಿಗೆ ಅನುಗುಣವಾಗಿ ಅಥವಾ ಮುಂದಿನ ಆದೇಶದವರೆಗೆ ಈ ನಿಯುಕ್ತಿಯು ಜಾರಿಯಲ್ಲಿರುತ್ತದೆ. ಅಭ್ಯರ್ಥಿಗಳು ನರ್ಸಿಂಗ್‍ದಲ್ಲಿ ಡಿಪ್ಲೋಮಾ ಹೊಂದಿರಬೇಕು. ಮೇರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.
ಅಭ್ಯರ್ಥಿಗಳು ಕಲಬುರಗಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರಿಗೆ ಅಗತ್ಯ ದಾಖಾಲಾತಿಗಳೊಂದಿಗೆ 2020ರ ಆಗಸ್ಟ್ 21 ರ ಸಂಜೆ 5 ಗಂಟೆಯೊಳಗಗಿ ಅರ್ಜಿ ಸಲ್ಲಿಸಬೇಕು. ನಿಗದಿತ ಅರ್ಜಿ ನಮೂನೆಯನ್ನು ಈ ಸಂಸ್ಥೆಯ www.gims-gulbarga.com ವೆಬ್‍ಸೈಟ್‍ದಿಂದ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…