ಬಿಸಿ ಬಿಸಿ ಸುದ್ದಿ

ಸರಕು ವಹನಗಳ ಮೇಲೆ ಜನರನ್ನು ಕೂಡಿಸುವುದು ಅಪರಾಧ

ಸುರಪುರ: ತಾಲ್ಲುಕಿನ ಅನೇಕ ಕಡೆಗಳಲ್ಲಿ ಸರಕು ಸಾಗಣೆ ವಾಹನಗಳ ಮೇಲೆ ಜನರನ್ನು ಕೂಡಿಸಿ ಸಾಗಿಸುತ್ತಿರುವುದು ಕಂಡು ಬಂದಿದೆ.ಅಂತಹ ವಾಹನಗಳ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಸಹಾಯಕ ಉಪ ನಿರೀಕ್ಷಕ (ಎಎಸ್‌ಐ) ಹನುಮಂತಪ್ಪ ತಿಳಿಸಿದರು.

ನಗರದಲ್ಲಿ ಸುರಪುರ ಪೊಲೀಸ್ ಠಾಣೆಯಿಂದ ಹಮ್ಮಿಕೊಳ್ಳಲಾದ ಸರಕು ಸಾಗಣೆ ವಾಹನಗಳ ಮೇಲೆ ಜನರ ಸಾಗಿಸುವುದು ಅಪರಾಧ ವಿಷಯದ ಕುರಿತು ಹಮ್ಮಿಕೊಂಡಿದ್ದ ಜನ ಜಾಗೃತಿ ಜಾಥಾದ ನೇತೃತ್ವ ವಹಿಸಿ ಮಾತನಾಡಿ,ಸರಕು ಸಾಗಣೆ ವಾಹನಗಳ ಮೇಲೆ ಜನರನ್ನು ಸಾಗಿಸುವುದು ಅಪರಾಧವಾಗಿದೆ.ಇದರಿಂದ ಜನರು ಅಪಾಯಕ್ಕೀಡಾಗುವ ಸಂಭವವಿರುತ್ತದೆ.ಅಲ್ಲದೆ ಸರಕು ಸಾಗಣೆ ವಾಹನಗಳು ಕೇವಲ ಸರಕು ಸಾಗಾಣಿಕೆಗೆ ಪರವಾನಿಗೆ ಪಡೆದು ಜನರನ್ನು ಸಾಗಿಸುವುದು ಕಾನೂನಿನ ಉಲ್ಲಂಘಟನೆಯಾಗುತ್ತದೆ.

ಇಂತಹ ವಾಹನಗಳು ಕಂಡುಬಂದರೆ ವಾಹನಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗುವುದು.ಕಳೆದ ಕೆಲ ದಿನಗಳ ಹಿಂದೆ ಸರಕು ಸಾಗಣ ವಾಹನದ ಮೇಲೆ ಜನರನ್ನು ಕೂಡಿಸಿ ಸಾಗಿಸುವಾಗ ಠಾಣೆ ಆರಕ್ಷಕ ನಿರೀಕ್ಷಕ ಆನಂದರಾವ್ ಸಾಹೇಬರು ವಾಹನಗಳ ಮೇಲೆ ಪ್ರಕರಣ ದಾಖಲಿಸಿದ್ದಾರೆ.ಮುಂದೆಯೂ ಅಂತಹ ವಾಹನಗಳು ಕಂಡು ಬಂದರೆ ವಾಹನಗಳ ಮೇಲೆ ಮತ್ತು ಚಾಲಕರ ಮೇಲೆ ಪ್ರಕರಣ ದಾಖಲಿಸಲಾಗುವದು.ಸಾರ್ವಜನಿಕರು ಕೂಡ ಇಂತಹ ವಾಹನಗಳ ಮೇಲೆ ಕುಳಿತು ಪ್ರಯಾಣ ಮಾಡದಂತೆ ತಿಳಿಸಿದರು.

ಇದಕ್ಕು ಮುನ್ನ ನಗರದ ದರಬಾರ ರಸ್ತೆ ಸೇರಿದಂತೆ ಅನೇಕ ಕಡೆಗಳಲ್ಲಿ ಸಂಚರಿಸಿ ಜನ ಜಾಗೃತಿ ಮೂಡಿಸಿದರು.ಈ ಜಾಥಾದಲ್ಲಿ ಆರಕ್ಷಕ ಸಿಬ್ಬಂದಿಗಳಾದ ಬಸವರಾಜ ಮುದ್ಗಲ್,ಸೋಮಯ್ಯ ಸ್ವಾಮಿ ಹಾಗು ಹಲವಾರು ಜನ ಸಾರ್ವಜನಿಕರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

11 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

13 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

20 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

20 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

21 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago