ಸರಳವಾಗಿ ಶ್ರೀ ಗಣೇಶೋತ್ಸವ ಅಚರಣೆಗೆ ಸೂಚನೆ

ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವು ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು 2020ರ ಆಗಸ್ಟ್ 22 ರಂದು ಶ್ರೀ ಗಣೇಶ ಉತ್ಸವ ಹಬ್ಬವನ್ನು ಸರಳ ಮತ್ತು ಭಕ್ತಿಪೂರ್ವಕವಾಗಿ ರಾಜ್ಯ ಸರ್ಕಾರದ ಮಾರ್ಗಸೂಚಿಯನ್ವಯ ಆಚರಿಸಬೇಕೆಂದು ಕಲಬುರಗಿ ಪೊಲೀಸ್ ಅಧೀಕ್ಷಕರಾದ ಡಾ. ಸಿಮಿ ಮರಿಯಮ್ ಜಾರ್ಜ್ ಅವರು ತಿಳಿಸಿದ್ದಾರೆ.

ಶ್ರೀ ಗಣೇಶ ಹಬ್ಬದ ಸಂದರ್ಭದಲ್ಲಿ ಸರ್ಕಾರದ ಈ ಕೆಳಕಂಡ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಶ್ರೀ ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನಗಳಲ್ಲಿ, ತಮ್ಮ ಮನೆಗಳಲ್ಲಿ ಆಥವಾ ಸರ್ಕಾರಿ, ಖಾಸಗಿ, ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವವರು ಗಣೇಶ ಮೂರ್ತಿಯನ್ನು ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಪ್ರತಿಷ್ಠಾಪಿಸಬೇಕು.

ಪಾರಂಪರಿಕ ಗಣೇಶೋತ್ಸವಕ್ಕಾಗಿ, ಗಣೇಶೋತ್ಸವ ಸಮಿತಿಗಳು, ಮಂಡಳಿಗಳು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಮುನಿಸಿಪಲ್ ಕಾರ್ಪೊರೇಷನ್/ ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯಬೇಕು. ಒಂದು ವಾರ್ಡಿಗೆ / ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶೋತ್ಸವವನ್ನು ಮಾತ್ರ ಆಚರಿಸಲು ಪ್ರೋತ್ಸಾಹಿಸುವುದು. ಇಂತಹ ಸ್ಥಳಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಿಸಬೇಕು. ಒಮ್ಮೆಲೆ 20ಕ್ಕಿಂತ ಹೆಚ್ಚಿನ ಜನ ಸೇರದಂತೆ ಭಕ್ತಾದಿಗಳಿಗೆ ಅನುವು ಮಾಡಬೇಕು.

ಗಣೇಶಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕøತಿಕ, ಸಂಗೀತ, ನೃತ್ಯ ಇನ್ನೀತರೆ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ. ಶ್ರೀ ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಸಂದರ್ಭಗಳಲ್ಲಿ ಯಾವುದೇ ರೀತಿಯ ಮೆರವಣಿಗೆಯನ್ನು ಮಾಡುವಂತಿಲ್ಲ. ಇದನ್ನು ಇದನ್ನು ಸಂಪೂರ್ಣವಾಗಿ ನಿರ್ಭಂಧಿಸಲಾಗಿದೆ.

ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸಬೇಕು. ಸರ್ಕಾರಿ / ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಗಳನ್ನು ಅತಿ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ/ ಜಿಲ್ಲಾಡಳಿತ /ಹತ್ತಿರದ ಸ್ಥಳೀಯ ಸಂಸ್ಥೆಗಳ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ ಅಥವಾ ಮೊಬೈಲ್ ಟ್ಯಾಂಕ್‍ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್‍ಗಳಲ್ಲಿ ವಿಸರ್ಜಿಸಬೇಕು.

ಶ್ರೀ ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನ/ಸಾರ್ವಜನಿಕ ಸ್ಥಳಗಳಲ್ಲಿ ದಿನನಿತ್ಯ ನ್ಯಾನಿಟೈಸೇಷನ್ ಮಾಡಬೇಕು. ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾದಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕಿøೀನಿಂಗ ವ್ಯವಸ್ಥೆಯನ್ನು ಕಲ್ಪಿಸಬೇಕು. ದರ್ಶನಕ್ಕಾಗಿ ಬರುವ ಭಕ್ತರಿಗೆ ಕನಿಷ್ಠ 6 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಭಕ್ತಾದಿಗಳು ಮತ್ತು ಸಾರ್ವನಿಕರು ಕಡ್ಡಾಯವಾಗಿ ಮುಖಗವಸು (ಮಾಸ್ಕ್) ಧರಿಸಬೇಕು.

ಕೋವಿಡ್-19 ಸಾಂಕ್ರಾಮಿಕ ಸೊಂಕು ಹರಡುವಿಕೆಯನ್ನು ತಡಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನ ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ತಪ್ಪದೇ ಪಾಲಿಸಬೇಕು. ಅಲ್ಲದೇ ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಎಲ್ಲಾ ಇಲಾಖೆಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸಬೇಕು.

ಶ್ರೀ ಗಣೇಶೋತ್ಸವ ಆಚರಣೆ ಕಾಲಕ್ಕೆ ಸಂದರ್ಭಕ್ಕನುಗುಣವಾಗಿ ಸರ್ಕಾರ, ಜಿಲ್ಲಾಡಳಿತ ಪೊಲೀಸ್, ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ/ಪ್ರಾಧಿಕಾರಗಳಿಂದ ಹೊರಡಿಸಲಾದ ಎಲ್ಲಾ ಆದೇಶ/ ನಿರ್ದೇಶನ ಹಾಗೂ ಸೂಚನೆಗಳನ್ನು ಸಹ ಕಡ್ಡಾಯವಾಗಿ ಪಾಲಿಸಬೇಕು. ಹಬ್ಬ-ಹರಿದಿನಗಳು ಸಮಾಜದಲ್ಲಿ ಶಾಂತಿ ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ಶ್ರೀ ಗಣೇಶೋತ್ಸವ ಹಬ್ಬವನ್ನು ಅದೇ ರೀತಿಯಿಂದಲೇ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡುವುದು.

ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ/ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005 ಭಾರತೀಯ ದಂಡ ಸಂಹಿತೆ ಕಲಂ 188ರ ಅಡಿಯಲ್ಲಿ ಶಿಸ್ತಿನ/ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪ-ಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

2 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

7 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

18 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

20 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

20 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420