ಮಂಗಳೂರು: ಇಲ್ಲಿನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇದೆಯೆಂದು ಹುಸಿ ಬೆದರಿಕೆ ಹಾಕಿದ್ದ ಓರ್ವ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿರುವ ಘಟನೆ ಇಂದು ಸಂಭವಿಸಿದೆ.
ಬಂಧಿತ ಆರೋಪಿ ಕಾರ್ಕಳ ತಾಲೂಕಿನ ಮುದ್ರಾಡಿ ಗ್ರಾಮ ನಿವಾಸಿ ವಸಂತ್ (33) ವರ್ಷದ ಎಂದು ಗುರುತಿಸಲಾಗಿದ್ದು, ಬುಧವಾರ ವಿಮಾನ ನಿಲ್ದಾಣದ ಮಾಜಿ ನಿರ್ದೇಶಕ ಎಂ ಆರ್ ವಾಸುದೇವರಿಗೆ ಕರೆ ಮಾಡಿ ವಿಮಾನ ನಿಲ್ದಾಣದಲ್ಲಿ ಬಾಂಬ್ ಇದೆಯೆಂದು ಹುಸಿ ಬೆದರಿಕೆ ಹಾಕಿದ್ದ, ಉಡುಪಿ ಪೊಲೀಸರ ನೆರವು ಪಡೆದು ಮಂಗಳೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಬೆದರಿಕೆ ಹಾಕಿರುವ ಬಗ್ಗೆ ವಾಸುದೇವ್ ರಾವ್ ಅವರು ಏರ್ ಪೋರ್ಟ್ ಅಧಿಕಾರಿಗಳಿಗೆ ಮಾಹಿತಿ ನೀಡಿದ ಪರಿಣಾಮ ತಕ್ಷಣ ಕಾರ್ಯಾಚರಣೆಗೆ ಇಳಿದ ಸಿಐಎಸ್ಎಫ್ ಸಿಬ್ಬಂದಿ ಹಾಗೂ ಪೊಲೀಸರು ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತಪಾಸಣೆ ನಡೆಸಿದರು.
ನಿಲ್ದಾಣದಲ್ಲಿ ಯಾವುದೇ ಬಾಂಬ್ ಹಾಗೂ ಅನುಮಾನಾಸ್ಪದ ವಸ್ತು ಪತ್ತೆಯಾಗಿರಲಿಲ್ಲ ಎಂದು ತಿಳಿದುಬಂದ ಹಿನ್ನೆಯಲ್ಲಿ ಇದೊಂದು ಹುಸಿ ಬಾಂಬ್ ಕರೆಯಾಗಿದೆ ಎನ್ನಲಾಗಿತ್ತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…