ಗಣೇಶ ಮೂರ್ತಿ ವಿಸರ್ಜನೆಗೆ ನಗರದ 12 ಕಡೆ ಮೊಬೈಲ್ ಟ್ಯಾಂಕ್ ವ್ಯವಸ್ಥೆ

0
35

ಕಲಬುರಗಿ: ಕೋವಿಡ್ ಹಿನ್ನೆಲೆಯಲ್ಲಿ ಕಲಬುರಗಿ ನಗರದಲ್ಲಿ 2020ರ ಆಗಸ್ಟ್ 22 ರಂದು ಶ್ರೀ ಗಣೇಶೋತ್ಸವವನ್ನು ಸರಳ ಹಾಗೂ ಭಕ್ತಿಪೂರ್ವಕವಾಗಿ ಆಚರಿಸಬೇಕು. ಗಣೇಶ ಮೂರ್ತಿ ವಿಸರ್ಜನೆಗಾಗಿ ಕಲಬುರಗಿ ನಗರದ ಪ್ರಮುಖ 12 ಕಡೆ ಮೊಬೈಲ್ ಟ್ಯಾಂಕ್ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ತಮ್ಮ ಮನೆಯಲ್ಲಿ ಪ್ರತಿಷ್ಠಾಪಿಸಿದ ಗಣಪನ ಮೂರ್ತಿಯನ್ನು ಮೊಬೈಲ್ ಟ್ಯಾಂಕ್‍ನಲ್ಲಿ ವಿಸರ್ಜಿಸಬೇಕೆಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ತುಕಾರಾಂ ಪಾಂಡ್ವೆ ಅವರು ತಿಳಿಸಿದ್ದಾರೆ.

ಇದಕ್ಕಾಗಿ ಕಲಬುರಗಿ ನಗರದ ಅಯ್ಯರವಾಡಿ, ಶಹಾಬಜಾರ ನಾಕಾ, ಜೇವರ್ಗಿ ಕ್ರಾಸ್, ಖರ್ಗೆ ಪೆಟ್ರೋಲ್ ಪಂಪ್, ಓಂ ನಗರ, ವಿದ್ಯಾನಗರ, ರಾಮಂದಿರ ವೃತ್ತ, ಆಳಂದ ಚೆಕ್ ಪೋಸ್ಟ್, ರಾಜಾಪುರದ ಆರ್.ಟಿ.ಓ. ಕ್ರಾಸ್, ಎಂ.ಜಿ. ರಸ್ತೆ, ಪುಟಾಣಿ ಗಲ್ಲಿ ಹಾಗೂ ಕೋರಂಟಿ ಹನುಮಾನ ದೇವಸ್ಥಾನ ಸ್ಥಳಗಳಲ್ಲಿ ಮೊಬೈಲ್ ಟ್ಯಾಂಕ್ ವ್ಯವಸ್ಥೆ ಮಾಡಲಾಗಿದೆ. ಸುತ್ತಮುತ್ತಲಿನ ಜನರು ಈ ಸ್ಥಳಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.

Contact Your\'s Advertisement; 9902492681

ಕೋವಿಡ್-19 ಹಿನ್ನೆಲೆಯಲ್ಲಿ ಸಾರ್ವಜನಿಕರು ಗಣೇಶೋತ್ಸವ ಸಂದರ್ಭದಲ್ಲಿ ಸರ್ಕಾರದ ಕೆಳಕಂಡ ಪರಿಷ್ಕøತ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಗಣೇಶ ಪ್ರತಿಷ್ಠಾಪನೆಗೆ ಪೂರ್ವಾನುಮತಿ ಕಡ್ಡಾಯ: ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸಾರ್ವಜನಿಕರು ಶ್ರೀ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸುವ ಮೊದಲು ಸಂಬಂಧಪಟ್ಟ ಗಣಪತಿ ಮಂಡಳಿ ಸದಸ್ಯರು ಅಥವಾ ಸಿಬ್ಬಂದಿಗಳು ಮಹಾನಗರ ಪಾಲಿಕೆಯಿಂದ ಕಡ್ಡಾಯವಾಗಿ ಪೂರ್ವಾನುಮತಿಯನ್ನು ಪಡೆಯಬೇಕು.

ಹಬ್ಬ-ಹರಿದಿನಗಳು ಸಮಾಜದಲ್ಲಿ ಶಾಂತಿ ಸೌಹಾರ್ದತೆ ಮತ್ತು ಸಾಮರಸ್ಯಗಳನ್ನು ಉಂಟಾಗಲು ಪೂರಕವಾಗಿರುವುದರಿಂದ ಶ್ರೀ ಗಣೇಶೋತ್ಸವ ಹಬ್ಬವನ್ನು ಅದೇ ರೀತಿಯಿಂದಲೇ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡುವುದು. ರಾಷ್ಟ್ರಿಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರಕಾರದ ಆದೇಶ/ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ/ಕಾನೂನು ಕ್ರಮ ಮತ್ತು ಅನ್ವಯವಾಗುವ ಇತರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here