ಕಲಬುರಗಿ: ಹಿಂದುಳಿದ ಜನಾಂಗದ ಶ್ರೇಯೋಭಿವೃದ್ಧಿಗೆ ದುಡಿದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಜನಪರ ಆಡಳಿತ ನಮ್ಮೆಲ್ಲರಿಗೆ ಮಾದರಿಯಾಗಿದೆ ಎಂದು ಜಿಲ್ಲಾ ಪಂಚಾಯತಿಯ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ದಿಲೀಪ್ ಆರ್. ಪಾಟೀಲ ಹೇಳಿದರು.
ಗುರುವಾರ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಮತ್ತು ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಡಿ.ದೇವರಾಜ ಅರಸು ಅವರ 105ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಹಿಂದುಳಿದ ನೇತಾರನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದಲ್ಲದೆ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಅನೇಕ ವಸತಿ ನಿಲಯಗಳು, ಉಳುವವನೆ ಒಡೆಯದಂತಹ ಅನೇಕ ಜನಪರ ಯೋಜನೆಗಳು ರೂಪಿಸಿದ್ದಾರೆ ಎಂದು ದಿಲೀಪ್ ಆರ್. ಪಾಟೀಲ ತಿಳಿಸಿದರು.
ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಮಹಾಂತೇಶ ಕೌಜಲಗಿ ಮಾತನಾಡಿ, ಡಿ. ದೇವರಾಜ್ ಅರಸ್ ಅವರು ಮುಖ್ಯಮಂತ್ರಿಯಾಗಿದ್ದಾಗ ಭೂ-ಸುಧಾರಣೆ, ಉಳುವವನೆ ಭೂಮಿಯ ಒಡೆಯದಂತಹ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದು ಅಹಿಂದ ವರ್ಗಕ್ಕೆ ಸಾಮಾಜಿಕ ನ್ಯಾಯ ನೀಡಿದ ಪುಣ್ಯ ಪುರುಷರಾಗಿದ್ದಾರೆ. ಶಿಕ್ಷಣದಲ್ಲಿ ಸುಧಾರಣೆ ತಂದ ಕೀರ್ತಿ ಅವರಿಗೆ ಸಲ್ಲುತ್ತದೆ. ಹಿಂದುಳಿದ, ಶೋಷಿತರ ಜನಾಂಗ ಹಾಗೂ ದೀನ ದಲಿತರ ಬಗ್ಗೆ ವಿಶೇಷ ಕಾಳಜಿ ಹೊಂದಿದ ವ್ಯಕ್ತಿ ಅವರಾಗಿದ್ದರು ಎಂದರು.
ಡಿ. ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಲಬುರಗಿ ವಿಭಾಗೀಯ ವ್ಯವಸ್ಥಾಪಕ ನಾರಾಯಣ ಮೇರಲಿ ಅವರು ಸಹ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ಜಿ. ಸಂಗಾ ಮಾತನಾಡಿ, ಕೋವಿಡ್-19 ಹಿನ್ನೆಲೆಯಲ್ಲಿ ಈ ವರ್ಷ ಡಿ.ದೇವರಾಜ ಅರಸು ಅವರ ಜನ್ಮದಿನೋತ್ಸವವನ್ನು ಸರಳ ರೀತಿಯಾಗಿ ಆಚರಿಸಲಾಗುತ್ತಿದೆ. ಡಿ. ದೇವರಾಜ ಅರಸು ಅವರು ಹಿಂದುಳಿದ, ಅಲ್ಪಸಂಖ್ಯಾತರ ಜನಾಂಗದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ ಹಾಗೂ ಉತ್ತಮ ಆಡಳಿತ ನೀಡಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ. ಅವರ ಅಧಿಕಾರಾವಧಿಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗಿ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳನ್ನು ನಿರ್ಮಿಸಿದ್ದರು ಎಂದರು.
ಕಾರ್ಯಕ್ರಮದಲ್ಲಿ ಡಿ. ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕ ಜಗದೇವಪ್ಪ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ಮುಖಂಡ ಅಶೋಕ ಪೋತ್ದಾರ, ಬಿ.ಎಂ.ರಾವೂರ, ಶಂಕರ ಕಟ್ಟಿ ಸಂಗಾವಿ, ಅಶೋಕ ಡೈಮಂಡ್, ಮಲ್ಲಿಕಾರ್ಜುನ ಹೆಳವರ, ಸಾಯಬಣ್ಣಾ ಹೆಳವರ, ರಾಜೇಂದ್ರ ರಾಜನಾಳ, ಶರಣು ಕೋಲಿ, ಡಾ.ಬಾಬು ಪೂಜಾರಿ ಸೇರಿದಂತೆ ಸಾರ್ವಜನಿಕರು, ಅನೇಕರು ಉಪಸ್ಥಿತರಿದ್ದರು.
ಮೋರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಅಣವೀರ ಹರಸೂರ ನಿರೂಪಿಸಿದರು. ವ್ಯವಸ್ಥಾಪಕ ಸಂತೋಷ ರೆಡ್ಡಿ ವಂದಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…