ಆಳಂದ: ತಾಲೂಕಿನ ತಡಕಲ ಗ್ರಾಮದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪ್ರತಿಶತ ಫಲಿತಾಂಶ ಲಭಿಸಿದೆ.
ಪರೀಕ್ಷೆಗೆ ಹಾಜರಾದ ಎಲ್ಲ ೪೩ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ೯ ವಿದ್ಯಾರ್ಥಿಗಳು ಅಗ್ರಶ್ರೇಣಿಯಲ್ಲಿ ೩೪ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಕು. ಸೌಮ್ಯಶ್ರೀ ಚಂದ್ರಕಾಂತ ಪೂಜಾರಿ ಶೇ ೯೬.೩೬, ಕು. ಭಾಗ್ಯಶ್ರೀ ಚಂದ್ರಕಾಂತ ಶೇ. ೯೫.೫ ಅಂಕ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ಸಂಗಾ. ಶಾಲೆಯ ಪ್ರಾಚಾರ್ಯ ಶ್ರೀನಾಥ ಕಣ್ಣಿ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.