ಕಲಬುರಗಿ: ರಾಜ್ಯ ಕೋಲಿ ಗಂಗಾಮತ ಸಮಾಜದ ಗೌರವಾಧ್ಯಕ್ಷ ಕಲಬುರಗಿಯ ತಿಪ್ಪಣ್ಣಪ್ಪ ಕಮಕನೂರ ಅವರನ್ನು ಕಾಂಗ್ರೆಸ್ ಪಕ್ಷ ನೂತನವಾಗಿ ವಿಧಾನಪರಿಷತ್ ಸದಸ್ಯರನ್ನಾಗಿ ನೇಮಕಗೊಳಿಸಿದೆ.
ವಿಧಾನ ಪರಿಷತ್ ಸದಸ್ಯರಾಗಿ ನೇಮಕಗೊಂಡ ಕಮಕನೂರ ಅವರನ್ನು ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರು ಅಭಿನಂದನೆ ಸಲ್ಲಿಸಿದರು. ವಿಧಾನ ಪರಿಷತ್ ಸದಸ್ಯರನ್ನಾಗಲು ಮಾಜಿ ಲೋಕಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರು ಸಾಕಷ್ಟು ಶ್ರಮ ವಹಿಸಿದ್ದು, ಅವರಿಗೆ ಹಾಗೂ ಪಕ್ಷದ ಎಲ್ಲ ಮುಖಂಡರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಕಮಕನೂರ ತಿಳಿಸಿದ್ದಾರೆ