ಬಿಸಿ ಬಿಸಿ ಸುದ್ದಿ

ಸುರಪುರ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜಯಂತಿ ಆಚರಣೆ

ಸುರಪುರ: ನಗರದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕರ ನೇತೃತ್ವದಲ್ಲಿ ಮಾಜಿ ಪ್ರಧಾನಿ ರಾಜೀವಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸ್ ಅವರ ಜಯಂತಿಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತನಾಡಿ, ದೇಶದಲ್ಲಿಂದು ಮಾಹಿತಿ ತಂತ್ರಜ್ಞಾನ ಬೆಳೆಯಲು ಅಂದಿನ ಪ್ರಧಾನಿ ರಾಜೀವ ಗಾಂಧಿ ಕಾರಣ. ಅವರು ನಮ್ಮ ದೇಶದ ಸರ್ವಾಂಗಿಣ ಅಭಿವೃದ್ಧಿಗೆ ಶ್ರಮಿಸಿದ ಮಹಾನ ವ್ಯಕ್ತಿ ಹಾಗೆ ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಅವರುಕೂಡಾ ನಮ್ಮ ರಾಜ್ಯದಲ್ಲಿ ಹಿಂದುಳಿದ ಜನರನ್ನು ಸಾಮಾಜಿಕವಾಗಿ ಮುಂದೆ ತರುವಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಾಕಿ ಕೊಂಡು ಹಿಂದುಳಿದವರಿಗೆ ಆರ್ಥಿಕ, ಶೈಕ್ಷಣಿಕ ನೆರವನ್ನು ಸರ್ಕಾರದಿಂದ ಸಿಗುವಂತೆ ಮಾಡಿ ಅನೇಕರಿಗೆ ದಾರಿದೀಪವಾಗಿದ್ದಾರೆ ಇಂತಹಾ ಮಹಾನ ವ್ಯಕ್ತಿಗಳನ್ನು ನೆನೆದು ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದು ಉತ್ತಮ ಸಮಾಜವನ್ನು ನಿರ್ಮಿಸೋಣ ಮತ್ತು ಸಧ್ಯ ಕೊರೊನಾ ವೈರಾಣು ತಗುಲದಂತೆ ನಮ್ಮನ್ನು ನಾವುಗಳು ರಕ್ಷಿಸಿಕೊಳ್ಳಬೇಕಾದ ಪರಿಸ್ಥಿತಿ ಇದೆ ಜನರು ಇದರಿಂದ ಪಾರಾಗಬೇಕೆಂದರೆ ಕಡ್ಡಾಯವಾಗಿ ಮಾಸ್ಕಧರಿಸುವುದು ಮತ್ತು ಸಾಮಾಜಿಕ ಅಂತರ ಕಾಪಾಡಿಕೊಂಡು ಸ್ವಚ್ಛತೆಗೆ ಆದ್ಯತೆ ನೀಡಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಹಿರಿಯ ಕಾಂಗ್ರೇಸ್ ಮುಖಂಡರಾದ ಸೂಲಪ್ಪ ಕಮತಿಗಿ, ರಾಜ್ಯ ಅಪೇಕ್ಸ್ ಬ್ಯಾಂಕ ನಿರ್ದೇಶಕರಾದ ವಿಠ್ಠಲ ಯಾದವ, ರಾಜಾ ಪಿಡ್ಡನಾಯಕ(ತಾತಾ), ರಾಜಾ ವೇಣುಗೋಪಾಲ ನಾಯಕ, ರಾಜಾ ಸಂತೋಷ ನಾಯಕ,ರಾಜಾ ವಿಜಯ ಕುಮಾರ ನಾಯಕ, ನಿಂಗರಾಜ ಬಾಚಿಮಟ್ಟಿ ಅಧ್ಯಕ್ಷರು ಸುರಪುರ ಬ್ಲಾಕ್ ಕಾಂಗ್ರೆಸ್, ಕಾಂಗ್ರೆಸ್ ಎಸ್ಟಿ ವಿಭಾಗದ ರಾಜ್ಯ ಕಾರ್ಯದರ್ಶಿ ರಮೇಶ ದೊರೆ ಆಲ್ದಾಳ, ಎಪಿಎಂಸಿ ಸದಸ್ಯ ಮಲ್ಲಣ್ಣ ಸಾಹುಕಾರ ನರಸಿಂಗಪೇಟ, ಅಬ್ದುಲ ಗಫಾರ ನಗನೂರಿ, ಶೇಖ ಮಹಿಬೂಬ ಒಂಟಿ, ನಗರಸಭೆ ಸದಸ್ಯರಾದ ಕಮರುದ್ದೀನ್, ಮಹ್ಮದ್ ಶಕೀಲ್, ಶರೀಫ ಅಹ್ಮದ್, ಮಹಿಬೂಬ ಸಾಬ, ಜಹೀರ ಅಹ್ಮದ್, ಯುತ್ ಕಾಮಗ್ರೆಸ್ ತಾಲೂಕು ಅಧ್ಯಕ್ಷ ಸುಲೇಮಾನ ಇನ್ನು ಅನೇಕ ಜನ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರು ಹಾಜರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

13 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

23 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

23 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

23 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago