ನಾಗಮಂಗಲ: ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ದಿವಂಗತ ದೇವರಾಜ ಅರಸುರವರ ಜನ್ಮದಿನಾಚರಣೆ ಸರಳ ಹಾಗೂ ಸಾಂಕೇತಿಕವಾಗಿ ಪಟ್ಟಣದ ಹಿಂದುಳಿದ ವರ್ಗಗಳ ಇಲಾಖೆಯ ಕಚೇರಿಯಲ್ಲಿ. ಹಿಂದುಳಿದ ವರ್ಗಗಳ ಇಲಾಖೆ ವತಿಯಿಂದ ದೇವರಾಜ ಅರಸು ರವರ ಭಾವಚಿತ್ರಕ್ಕೆ ತಹಶೀಲ್ದಾರ್ ಕುಂಞಿ ಅಹಮದ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅನಂತರಾಜು, ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಮಂಜುನಾಥ್ ಯಡ್ರಾವಿ, ರವರು ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು.
ಪುಷ್ಪಾರ್ಚನೆ ಮಾಡಿ ಮಾತನಾಡಿದ ತಹಶೀಲ್ದಾರ್ ಕುಂಞಿ ಅಹಮದ್, ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಆದೇಶದಂತೆ, ದಿವಂಗತ ದೇವರಾಜ ಅರಸು ರವರ 105ನೇ ಜನ್ಮದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುತ್ತಿದೆ ದೇವರಾಜ ಅರಸುರವರು ರವರು ಒಬ್ಬ ಧೀಮಂತ ನಾಯಕ, ಹಿಂದುಳಿದ ವರ್ಗಗಳ ಹರಿಕಾರ, ಅವರ ಮುಖ್ಯಮಂತ್ರಿ ಅವಧಿಯಲ್ಲಿ ಭೂ ಸುಧಾರಣೆ ಹಾಗೂ ಉಳುವವನೇ ಭೂಮಿಯ ಒಡೆಯ ಕಾಯ್ದೆಯನ್ನು ಜಾರಿಗೆ ತಂದು ರೈತರಿಗೆ ನೆಮ್ಮದಿಯ ಬದುಕು ಕಟ್ಟಿಕೊಟ್ಟ ಧೀಮಂತ ನಾಯಕ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಪ್ರಜೆಯಾಗಿ ಬದುಕೋಣ ಎಂದು ತಿಳಿಸಿದರು.
ಇದೇವೇಳೆ ಮಾತನಾಡಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅನಂತರಾಜು, ರವರು ಅರಸು ಅವರು ಸಾಮಾಜಿಕ ಕಳಕಳಿಯನ್ನು ಹೊಂದಿದ್ದವರು.ಶ್ರೀ ಸಾಮಾನ್ಯರಿಗೆ ಸಾಮಾಜಿಕ ನ್ಯಾಯವನ್ನು ದೊರಕಿಸಿಕೊಟ್ಟವರು.ಹಿಂದುಳಿದ ವರ್ಗಗಳಕಲ್ಯಾಣ ಇಲಾಖೆಯನ್ನು ತೆರೆದು ಸಮಾಜದಲ್ಲಿ ಸರ್ವರಿಗೂ ಸಹಬಾಳ್ವೆಯನ್ನು ನಡೆಸಲು ಅನುವು ಮಾಡಿಕೊಟ್ಟವರು.ತೀರಾ ತಳಮಟ್ಟದಲ್ಲಿದ್ದ ಜನಾಂಗಗಳು ಸಹ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಪ್ರಮುಖವಾಗಿ ಪಾತ್ರ ವಹಿಸಿದರು. ಉಳುವವನೆ ಭೂಮಿಯ ಒಡೆಯ ಎಂಬ ಕಾನೂನು ಜಾರಿಗೆ ತಂದವರು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಂಜುನಾಥ್, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹಾಗು ಸಂತೋಷ್, ಸುಭಾಸ್ ಉಮೇಶ್, ಗುರುಮೂರ್ತಿ ಮೇಲ್ವಿಚಾರಕರುಗಳಾದ ಹರೀಶ್, ರಾಜೇಗೌಡ, ಹಿಂದುಳಿದ ವರ್ಗಗಳ ಇಲಾಖೆಯ ಸಿಬ್ಬಂದಿಗಳು ಹಾಗೂ ವಸತಿ ನಿಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವರದಿ: ದೇ.ರಾ .ಜಗದೀಶ ನಾಗಮಂಗಲ
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…