ಜೇವರ್ಗಿ: ತಾಲೂಕಿನ ಮಿನಿ ವಿಧಾನಸೌಧ ಎದುರುಗಡೆ ಕಾಂಗ್ರೆಸ್ ಪಕ್ಷದ ವತಿಯಿಂದ ಬಿಜೆಪಿ ಸರ್ಕಾರದ ವಿರುದ್ಧ ”ಜನ ಧ್ವನಿ ಧರಣಿ ಸತ್ಯಾಗ್ರಹ ” ನಡೆಯಿತು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡರಾದ ವಿಜಯಕುಮಾರ್ ಪಾಟೀಲ್ ಮಾತನಾಡಿ ಸರ್ಕಾರದ ವಿರುದ್ಧ ಗುಡುಗಿದರು. ಬಿಜೆಪಿ ಸರಕಾರ ಕೋವಿಡ್ 19 ನಿಯಂತ್ರಣ ಮಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದರು.
ನೆರೆಹಾವಳಿಯಿಂದ ಜನರು ಬೇಸತ್ತು ತಮ್ಮ ಮನೆಮಠಗಳು ಆಸ್ತಿಗಳು ಕಳೆದುಕೊಂಡಿದ್ದಾರೆ ಇದರ ಬಗ್ಗೆ ಗಮನ ಹರಿಸುತ್ತಿಲ್ಲ ಈ ಸರ್ಕಾರ. ಕೇವಲ ದೊಡ್ಡ ದೊಡ್ಡ ಹುದ್ದೆಗಳಲ್ಲಿರುವ ಅಧಿಕಾರಿಗಳಿಗೆ ವರ್ಗಾವಣೆ ಮಾಡುವಲ್ಲಿ ಬಿಜಿಯಾಗಿದೆ .ಈ ಸರ್ಕಾರ ರೈತರ ಮತ್ತು ಜನಸಾಮಾನ್ಯರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
ಬಿಜೆಪಿ ಸರಕಾರ ರಾಜ್ಯದಲ್ಲಿ ಆಡಳಿತ ಮಾಡುತ್ತಿದ್ದು ಅನೇಕ ಸಮಸ್ಯೆಗಳ ಸರಮಾಲೆಗಳು ಹುಟ್ಟಿಕೊಂಡಿದೆ ಅದನ್ನು ಪರಿಹರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸಿದ್ದಲಿಂಗ ರೆಡ್ಡಿ ಇಟಗ, ಕಾಂಗ್ರೆಸ್ ಯುವ ಮುಖಂಡರಾದ ರಾಜಶೇಖರ್ ಸಿರಿ, ಕಾಶಿಂ ಪಟೇಲ್ ಮುದವಾಳ, ಚಂದ್ರಶೇಖರ್ ನೀರಡಗಿ, ರವಿ ಕೊಳುಕೊರ, ಸಲೀಂ ಕಣ್ಣಿ, ರಿಯಾಜ್ ಪಟೇಲ್, ಮಲ್ಲಿಕಾರ್ಜುನ್ ಬೂದಿಹಾಳ, ಸಂತೋಷ ಗುಡೂರ್, ಲಿಂಗರಾಜ್ ಮಾಸ್ಟರ್, ಕಾಂಗ್ರೆಸ್ ಪಕ್ಷದ ಯುವ ಮತ್ತು ಹಿರಿಯ ನಾಯಕರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…