ಬಿಸಿ ಬಿಸಿ ಸುದ್ದಿ

KSLU ನ ವಿದ್ಯಾರ್ಥಿ ವಿರೋಧಿ ನೀತಿ ಖಂಡಿಸಿ SFI ಪ್ರತಿಭಟನೆ

ರಾಯಚೂರು : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯವು (KSLU) ಕಾನೂನು ವಿದ್ಯಾರ್ಥಿಗಳ ಪರೀಕ್ಷಾ ರದ್ದು ಗೊಳಿಸಲು ಒತ್ತಾಯಿಸಿ, ವಿಶ್ವವಿದ್ಯಾಲಯದ ವಿದ್ಯಾರ್ಥಿ ವಿರೋಧಿ ನೀತಿ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (SFI) ರಾಯಚೂರು ಜಿಲ್ಲಾ ಸಮಿತಿಯ ವತಿಯಿಂದ ನಗರದ ಜಿಲ್ಲಾಧಿಕಾರಿ ಕಛೇರಿಯ ಮುಂಭಾಗದಲ್ಲಿ ಹೋರಾಟವನ್ನು ಮಾಡಲಾಯಿತು.

ಹೋರಾಟವನ್ನು ಉದ್ದೇಶಿಸಿ SFI ರಾಜ್ಯ ಉಪಾಧ್ಯಕ್ಷರಾದ ಶಿವಕುಮಾರ ಮ್ಯಾಗಳಮನಿ ಮಾತನಾಡುತ್ತಾ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ವು ಪ್ರಾರಂಭದಿಂದಲೂ ವಿದ್ಯಾರ್ಥಿ ವಿರೋಧಿ ನೀತಿಯನ್ನು ಅನುಸರಿಸುತ್ತಾ ಬರುತ್ತಿದೆ, ಎಲ್ಲಾ ವಿಚಾರದಲ್ಲೂ ಈ ನೀತಿಯನ್ನು ಜಾರಿ ಮಾಡಲು ವಿಶ್ವವಿದ್ಯಾಲಯ ಮುಂದಾಗಿರುವುದು ಖಂಡನೀಯ ಕೊರೋನಾದಂತಹ ಸಂಕಷ್ಟದ ಸಮಯದಲ್ಲೂ ತನ್ನ ದಮನಕಾರಿ ನೀತಿಯನ್ನು ವಿದ್ಯಾರ್ಥಿಗಳ ಮೇಲೆ ಹೇರುತ್ತಿದೆ ಕೂಡಲೇ ಅದನ್ನು ಕೈ ಬಿಟ್ಟು ವಿದ್ಯಾರ್ಥಿಗಳ ಹಿತ ಕಾಪಾಡಲು ಮುಂದಾಗಬೇಕು ಮತ್ತು ಪ್ರಮುಖ ಬೇಡಿಕೆಗಳಾದ LLB ವಿದ್ಯಾರ್ಥಿಗಳ ಪರೀಕ್ಷೆಗಳನ್ನು ರದ್ದುಗೊಳಿಸಿ ಮುಂದಿನ ತರಗತಿಗೆ ಪ್ರಮೊಟ್ ಮಾಡಬೇಕು.

ಕೊವಿಡ್ -19 ರಭಸದಿಂದ ಹರಡುತ್ತಿರುವ ಕಾಲದಲ್ಲೇ ಕೆಎಸ್ಎಲ್ ಯು UGC ನಿರ್ದೇಶನಗಳನ್ನು ಧಿಕ್ಕರಿಸಿ ಕಾನೂನು ಪ್ರಥಮ, ದ್ವಿತೀಯ ವರ್ಷದ LLB ವಿದ್ಯಾರ್ಥಿಗಳ ಪರಿಕ್ಷೆಗಳನ್ನು ನಡೆಸಲು ಮುಂದಾಗಿರುವ ನಿರ್ಣಯವನ್ನು ಎಸ್ಎಫ್ಐ ರಾಯಚೂರು ಜಿಲ್ಲಾ ಸಮಿತಿ ತೀವ್ರವಾಗಿ ವಿರೋಧಿಸುತ್ತದೆ. ಎಲ್ಲಾ ಹಂತದ ಪರೀಕ್ಷೆ ಗಳನ್ನು ರದ್ದು ಮಾಡಿ ಮುಂದಿನ ತರಗತಿಗೆ ಪ್ರಮೊಟ್ ಮಾಡಬೇಕು.

ಪರೀಕ್ಷಾ ಶುಲ್ಕ ಆದೇಶವನ್ನು ಈ ಕೂಡಲೇ ವಾಪಸ್ ಪಡೆದು ಕಟ್ಟಿರುವ ಶುಲ್ಕವನ್ನು ವಿದ್ಯಾರ್ಥಿಗಳಿಗೆ ವಾಪಸ್ ನೀಡಬೇಕು. ನಂತರ ಆಗಸ್ಟ್ – 24 ರೊಳಗೆ ಎಲ್ಲ LLB ವಿದ್ಯಾರ್ಥಿಗಳು ಪರೀಕ್ಷಾ_ಶುಲ್ಕ ಪಾವತಿಸಬೇಕು ಎಂಬ ಆದೇಶವನ್ನು ಈ ಕೂಡಲೇ ವಾಪಸ್ ಪಡೆಯಬೇಕು ಹಾಗೂ ಕಟ್ಟಿರುವ ಶುಲ್ಕವನ್ನು ವಿದ್ಯಾರ್ಥಿಗಳಿ ಹಿಂತಿರುಗಿಸಬೇಕೆಂದು ಎಸ್ಎಫ್ಐ ಒತ್ತಾಯಿಸುತ್ತದೆ. ಕೊವಿಡ್ ಲಾಕ್ ಡೌನ್ ಸಮಯದಲ್ಲಿ ತೀವ್ರ ಆರ್ಥಿಕ ಸಂಕಷ್ಟದಿಂದ ನರಳುತ್ತಿರುವ ವಿದ್ಯಾರ್ಥಿ, ಪೋಷಕರನ್ನು ಬಲವಂತವಾಗಿ ದುಬಾರಿ ಪರೀಕ್ಷಾ ಶುಲ್ಕ ಪಾವತಿಸಲು ಅವಧಿ ನಿಗದಿ ಮಾಡಿ ಇಕ್ಕಟ್ಟಿಗೆ ಸಿಲುಕಿಸಿರುವ ಆದೇಶವನ್ನು ವಾಪಸ್ ಪಡೆದುಕೊಳ್ಳಬೇಕು.

LLB ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪ್ರಥಮ ಮೌಲ್ಯ ಮಾಪನದಲ್ಲೇ ಉತ್ತಮ ಫಲಿತಾಂಶಗಳು ನೀಡದೆ ಕಡಿಮೆ ಅಂಕಗಳ ಅಂತರದಲ್ಲಿ ವಿಷಯಗಳನ್ನು ಅನುತ್ತೀರ್ಣಗೊಳಿಸಿ ನಂತರ ಮರುಮೌಲ್ಯಮಾಪನ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ಮೇಲೆ ದುಬಾರಿ ಶುಲ್ಕಗಳ ಹೊರೆ ವಿಧಿಸಿ ಕೋಟ್ಯಂತರ ರೂಪಾಯಿ ಹಣ ದರೋಡೆ ಮಾಡುತ್ತಿರುವ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿ ವಿರೋಧಿ ನೀತಿ ನಿಲ್ಲಿಸಬೇಕು. ಹಾಗೂ ಮರು ಮೌಲ್ಯ ಮಾಪನದಲ್ಲಿ ಪಾಸ್ಸಾದ ವಿದ್ಯಾರ್ಥಿಗಳಿಗೆ ಕಟ್ಟಿದ ಪೂರ್ಣ ಶುಲ್ಕವನ್ನು ಮರು ಪಾವತಿ ಮಾಡಬೇಕು, ಕಾನೂನು ಪದವಿ ಕಲಿಯಲು ಆಸಕ್ತಿ ಇರುವ ಎಲ್ಲಾ ವಿದ್ಯಾರ್ಥಿಗಳಿಗೆ ಈ ವರ್ಷದಲ್ಲಿ ಉಚಿತ ಪ್ರವೇಶ ನೀಡಿ. ಜೊತೆಗೆ ಬಾಕಿ ಇರುವ ವಿದ್ಯಾರ್ಥಿ ವೇತನ ನೀಡಲು ಸಂಬಂಧಿಸಿದ ಇಲಾಖೆಗಳಿಗೆ ನಿರ್ದೇಶನ ನೀಡಬೇಕು ಹಾಗೂ ಇತರ ಬೇಡಿಕೆಗಳನ್ನು ಈಡೇರಿಸಿಬೇಕೆಂದು ಆಗ್ರಹಿಸಿದರು.

ಒಂದು ವೇಳೆ ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ರಾಜ್ಯ ವ್ಯಾಪಿ ಉಗ್ರವಾದ ಹೋರಾಟ ಕ್ಕೆ ಮುಂದಾಗುವುದರ ಜೊತೆಗೆ ವಿಶ್ವವಿದ್ಯಾಲಯಕ್ಕೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಎಚ್ಚರಿಸಿದರು. ನಂತರ ಉಪ ಕುಲಪತಿ ಗಳಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಾರ್ಯಾಲಯದ ಸ್ಥಾನಿಕ ಅಧಿಕಾರಿಗಳ ಮೂಲಕ ಸಲ್ಲಿಸದರು.

ಈ ಸಂಧರ್ಭದಲ್ಲಿ SFI ಜಿಲ್ಲಾ ಕಾರ್ಯದರ್ಶಿ ಲಿಂಗರಾಜ ಕಂದಗಲ್ ಉಪಾಧ್ಯಕ್ಷರಾದ ಬಸವರಾಜ ದೀನಸಮುದ್ರ, ಸಹಕಾರ್ಯದರ್ಶಿ ಚಿದಾನಂದ ಕರಿಗೂಳಿ, ಜಿಲ್ಲಾ ಮುಖಂಡರಾದ, ಪ್ರವೀಣ್ ಕುಮಾರ, ಮೌನೇಶ ಬುಳ್ಳಾಪುರ, ಅಮರೇಗೌಡ, ಬಸವಂತ, ಕಾನೂನು ವಿದ್ಯಾರ್ಥಿಗಳಾದ ಶೋಯಬ್,ಮಲ್ಲರೆಡ್ಡಿ, ಗಂಗಾಧರ, ಆಶೀಪ್ ಯಾದಗಿರಿ, ಅಕ್ತರ್, ಆನಂದ ಕಂದಗಲ್, ಸೇರಿದಂತೆ ಅನೇಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

8 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

8 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

8 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago