ಕಲಬುರಗಿ: ಜನಸಂಘದಿಂದ ಭಾರತೀಯ ಜನತಾ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಹಿರಿಯ ಮುಖಂಡ ಡಿ ಎ ಚಿಲ್ಲಾಳ ನಿಧನಕ್ಕೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಡಿ ಎ ಚಿಲ್ಲಾಳರು ಒಂದು ಅವಧಿಗೆ ಭಾರತೀಯ ಜನತಾ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ, ಮೂರು ಅವಧಿಗೆ ಕಲಬುರಗಿ ಜಿಲ್ಲೆಯ ಭಾರತೀಯ ಜನತಾ ಪಕ್ಷದ ಅಧ್ಯಕ್ಷರಾಗಿ, ಕೇಂದ್ರ ಸರ್ಕಾರದಿಂದ ಎಸ್‍ಬಿಐ ಬ್ಯಾಂಕ್‍ನ ಸಲಹಾ ಮಂಡಳಿ ಸದಸ್ಯರಾಗಿ ಹಾಗೂ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಈ ಭಾಗದಲ್ಲಿ ತಳಮಟ್ಟದಿಂದ ಪಕ್ಷವನ್ನು ಸಂಘಟಿಸಿದ ಕೀರ್ತಿ ಚಿಲ್ಲಾಳ ಅವರಿಗೆ ಸಲ್ಲುತ್ತದೆ ಅವರ ನಿಧನದಿಂದ ಈ ಭಾಗ ಒಬ್ಬ ಹಿರಿಯ ಮುತ್ಸದ್ಧಿಯನ್ನು ಕಳೆದುಕೊಂಡಂತಾಗಿದೆ ಎಂದು ಸಂತಾಪ ಸೂಚಕ ಪತ್ರದಲ್ಲಿ ತಿಳಿಸಿದ್ದಾರೆ.
ಆಳಂದ ಮಂಡಲ ಅಧ್ಯಕ್ಷ ಆನಂದರಾವ ಪಾಟೀಲ ಕೊರಳ್ಳಿ, ಜಿ.ಪಂ ಸದಸ್ಯ ಹರ್ಷಾನಂದ ಗುತ್ತೇದಾರ ಸೇರಿದಂತೆ ಪಕ್ಷದ ಅನೇಕ ಮುಖಂಡರು ಸಂತಾಪ ಸೂಚಿಸಿದ್ದಾರೆ.
ಅಗತ್ಯಕ್ಕೆ ತಕ್ಕಂತೆ ಗೊಬ್ಬರ ಬಳಿಸಿ
ರೈತಾಪಿ ವರ್ಗದವರು ತಮಗೆ ಬೇಕಾದಷ್ಟು ಮಾತ್ರ ಗೊಬ್ಬರವನ್ನು ಬಳಸಬೇಕು ಅನಾವಶ್ಯಕವಾಗಿ ಗೊಬ್ಬರವನ್ನು ಸ್ಟಾಕ್ ಹಾಕಿಕೊಳ್ಳಬಾರದು ಎಂದು ಕಲಬುರಗಿ ಜಿ.ಪಂ. ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಗುರುಶಾಂತ ಪಾಟೀಲ ನಿಂಬಾಳ ಕೋರಿದ್ದಾರೆ.
ಅಂಗಡಿಯವರು ಕೂಡ ಗೊಬ್ಬರವನ್ನು ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಂಡರೆ ಅಗತ್ಯ ಕ್ರಮಕೈಗೊಳ್ಳಲಾಗುವುದು ಅಲ್ಲದೇ ಉದ್ದೇಶಪೂರ್ವಕವಾಗಿ ಗೊಬ್ಬರ ಅಭಾವ ಸೃಷ್ಟಿ ಮಾಡಿದರೇ ಸುಮ್ಮನಿರುವುದಿಲ್ಲ ಇದರ ಕುರಿತು ಏನಾದರೂ ದೂರುಗಳಿದ್ದರೇ ರೈತರು ನೇರವಾಗಿ ತಮ್ಮ ಕಚೇರಿಗೆ ಬಂದು ದೂರು ನೀಡಬಹುದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…