ಸುರಪುರ: ಅರಣ್ಯ ಇಲಾಖೆಯಿಂದ ಹಸಿರು ಕರ್ನಾಟಕ ಯೊಜನೆ ಅಂಗವಾಗಿ ನಗರದ ರಂಗಂಪೇಟೆಯ ತರಕಾರಿ ಮಾರುಕಟ್ಟೆಯಲ್ಲಿ ಸಸಿ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಫಾರೆಸ್ಟ್ ರೇಂಜ್ ಆಫೀಸರ್ ಮೌಲಾಲಿ ಸಾಬ್ ಮಾತನಾಡಿ,ಸರಕಾರ ನಾಡನ್ನು ಹಸಿರುಗೊಳಿಸುವ ಮೂಲಕ ಮಳೆ ಬೆಳೆ ಚೆನ್ನಾಗಿ ಬರಲೆಂದು ಆಶಯದಿಂದ ಹಸಿರು ಕರ್ನಾಟಕ ಯೋಜನೆಯನ್ನು ಜಾರಿಗೆ ತಂದಿದೆ.ಈ ಯೋಜನೆಯಡಿಯಲ್ಲಿ ರೈತರಿಗೆ ಹಾಗು ಸಾರ್ವಜನಿಕರಿಗೂ ವಿವಿಧ ಜಾತಿಯ ಸಸಿಗಳನ್ನು ವಿತರಿಸಲಾಗುತ್ತಿದೆ ಎಂದರು.
ಸಸಿಗಳನ್ನು ತೆಗೆದುಕೊಳ್ಳುವ ರೈತರು ಮತ್ತು ಸಾರ್ವಜನಿಕರು ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಬೆಳವಣಿಗೆಗೆ ಮುಂದಾಗಬೇಕಿದೆ.ಮರಗಳು ಬೆಳೆದರೆ ಮಳೆ ಬೆಳೆಯು ಚೆನ್ನಾಗಿ ಬರಲಿದೆ.ಉತ್ತಮ ಪರಿಸರವನ್ನು ನಿರ್ಮಿಸಲು ಮರ ಬೆಳೆಸುವುದು ಮುಖ್ಯವಾಗಿದೆ.ಆದ್ದರಿಂದ ರೈತರು ಖಾಲಿ ಜಾಗಗಳಲ್ಲಿ ಮರಗಳನ್ನು ಬೆಳೆಸುವಂತೆ ತಿಳಿಸಿದರು.
ನಂತರ ಹೊಂಗೆ ಬೇವು ಹುಣಸೆ ಬಾದಾಮಿ ನಿಂಬೆ ಸೇರಿದಂತೆ ವಿವಿಧ ಜಾತಿಯ ಸುಮಾರು ಒಂದು ಸಾವಿರ ಸಸಿಗಳನ್ನು ರೈತರು ಮತ್ತು ಸಾರ್ವಜನಿಕರಿಗೆ ವಿತರಿಸಲಾಯಿತು.ಈ ಸಂದರ್ಭದಲ್ಲಿ ಡೆಪ್ಯೂಟಿ ಆರ್.ಎಫ್‍ಗಳಾದ ಶರಣಪ್ಪ ಕುಂಬಾರ ಪರಶುರಾಮ ನಗರಸಭೆ ಸದಸ್ಯ ಮಹ್ಮದ್ ಗೌಸ್ ಶ್ರೀಮಂತ ಚಲುವಾದಿ ಅರಣ್ಯ ರಕ್ಷಕ ಉಪಳಪ್ಪ ಸೇರಿದಂತೆ ಅನೇಕ ಜನ ಸಿಬ್ಬಂದಿಗಳು ಹಾಗು ರೈತರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…