ಕಲಬುರಗಿ: ನಗರದಲ್ಲಿ ಇತ್ತಿಚೆಗೆ ಸುರಿದ ಭಾರಿ ಮಳೆಯಿಂದಾಗಿ ಭೀಮಳ್ಳಿ ಗ್ರಾಮದ ಮಲ್ಲಿಕಾರ್ಜುನ್ ಎಂಬ ಯುವಕ ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿದ್ದರಿಂದ ಸ್ಥಳಕ್ಕೆ ಮಾಜಿ ವಿಧಾನ ಪರಿಷತ್ ಸದಸ್ಯ ಅಲ್ಲಮ್ ಪ್ರಭು ಪಾಟೀಲ್, ಜಿಲ್ಲಾ ಪಂಚಾಯತ್ ಸದಸ್ಯ ಸಂತೋಷ ಪಾಟೀಲ್ ದಣ್ಣೂರ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ಎನ್ಡಿಆರ್ಎಫ್ ತಂಡ, ತಹಶೀಲ್ದಾರ್ ಅಧಿಕಾರಿಗಳು ಶೋಧ ಕಾರ್ಯ ನಡೆದಿದೆ.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ನೀಲಕಂಠರಾವ್, ಮಹಾಂತೇಶ ಪಾಟೀಲ್, ಸೋಮ ವಿ. ಸೋಮ, ಪುಂಡಲಿಕ್ ಪೂಜಾರಿ, ಪಿರಪ್ಪ ಜಮಾದಾರ, ಇಸ್ಮೈಲ್ ಹಾಗೂ ಗ್ರಾಮದ ಮುಖಂಡರು ಇದ್ದರು.