ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ ಏಳು ವರ್ಷದ ಬಾಲಕಿ ಸೇರಿ ಮತ್ತೆ 7 ಜನ ನಿಧನವಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 186ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.
ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯಿಂದ ಕಲಬುರಗಿಯ ಬ್ರಹ್ಮಪುರ ಪ್ರದೇಶದ 75 ವರ್ಷದ ವೃದ್ಧೆ (P-117560) ಜು.25 ರಂದು ಆಸ್ಪತ್ರೆಗೆ ದಾಖಲಾಗಿ ಜು.27 ರಂದು ನಿಧನರಾಗಿದ್ದಾರೆ.
ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯಿಂದ ಜೇವರ್ಗಿ ತಾಲೂಕಿನ ಹಿಪ್ಪರಗಾ ಎಸ್.ಎನ್. ಗ್ರಾಮದ 7 ವರ್ಷದ ಬಾಲಕಿ (P-200746) ಆ.13 ರಂದು ಸ್ವಗೃಹದಲ್ಲಿ ನಿಧನ.
ತೀವ್ರ ಉಸಿರಾಟ ತೊಂದರೆ ಜೊತೆಗೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ರೆಹಮತ್ ನಗರದ 41 ವರ್ಷದ ಪುರುಷ (P-207803) ಆ.12 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಆ.18 ರಂದು ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಹಿನ್ನೆಲೆ ಜೊತೆಗೆ ಹೃದ್ರೋಗದಿಂದ ಬಳಲುತ್ತಿದ್ದ ಕಲಬುರಗಿಯ ಕೋರ್ಟ್ ರಸ್ತೆಯಲ್ಲಿರುವ 92 ವರ್ಷದ ವೃದ್ಧ (P-223876) ಆ.13 ರಂದು ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.
ಐ.ಎಲ್.ಐ. ಹಿನ್ನೆಲೆಯಿಂದ ಕಲಬುರಗಿಯ ರಾಮ ನಗರದ 78 ವರ್ಷದ ವೃದ್ಧ (P-227301) ಆ.14ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಆ.20 ರಂದು ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಜೊತೆಗೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ಗಾಂಧಿ ನಗರದ 60 ವರ್ಷದ ವೃದ್ಧ (P-238220) ಆ.14 ರಂದು ಆಸ್ಪತ್ರೆಗೆ ದಾಖಲಾಗಿ ಆ.18 ರಂದು ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಜೊತೆಗೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ಮೆಹಬೂಬ್ ನಗರದ 60 ವರ್ಷದ ವೃದ್ಧೆ (P-240137) ಆ.17 ರಂದು ಆಸ್ಪತ್ರೆಗೆ ದಾಖಲಾಗಿ ಆ.18 ರಂದು ನಿಧನ ಹೊಂದಿದ್ದಾರೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದರು.
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…