ಗ್ರಾಮ ಪಂಚಾಯತ್ ಸಿಬ್ಬಂದಿಗಳ ನೇಮಕಕ್ಕೆ ಒತ್ತಾಯ

0
120

ಜೇವರ್ಗಿ :ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಅತಿ ಅಗತ್ಯವಿರುವ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ಜೇವರ್ಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಕಸಗುಡಿಸುವವರು ಸೇರಿದಂತೆ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಕಸ ಸಂಗ್ರಹಣೆಯ ವಾಹನವನ್ನು ಹಾಗೂ ಕಸವನ್ನು ಒಂದೆಡೆ ಹಾಕಲು ಡಂಪಿಂಗ್ ಯಾರ್ಡ್ ವ್ಯವಸ್ಥೆಯನ್ನು ಮಾಡಬೇಕು.

Contact Your\'s Advertisement; 9902492681

ಕಂಪ್ಯೂಟರ್ ಆಪರೇಟರ್ ಸೇರಿದಂತೆ ಪ್ರಥಮ ದರ್ಜೆ ಸಹಾಯಕರು ಹಾಗೂ ವಾಹನ ಚಾಲಕ ಹಾಗೂ ಸಿಪಾಯಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಜಿಲ್ಲಾ ಪಂಚಾಯತ್ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರವಿದ್ದು ಇದನ್ನು ಪರಿಶೀಲಿಸಿ ಕೂಡಲೇ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

ಕಸ ಸಂಗ್ರಹಿಸುವ ಹಾಗೂ ವಿಲೇವಾರಿ ಮಾಡುವ ಕಾರ್ಮಿಕರಿಗೆ ಪ್ರತಿವರ್ಷ ಉಚಿತ ಸಮವಸ್ತ್ರ ಹಾಗೂ ಸುರಕ್ಷಾ ಕವಚಗಳನ್ನು ವಿತರಣೆ ಮಾಡಬೇಕೆಂದು ಒತ್ತಾಯಿಸಲಾ ಕಾರ್ಮಿಕರ ಸುರಕ್ಷತೆಗೆ ಆಗ್ರಹ ಪಡಿಸಲಾಯಿತು. ದಲಿತ ಸಂಘರ್ಷ ಸಮಿತಿ ತಾಲೂಕ ಸಮಿತಿ ಜೇವರ್ಗ. ಜೇವರ್ಗಿ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ತಾಲೂಕ ಸಂಚಾಲಕರಾದ ಸಿದ್ದರಾಮ ಕಟ್ಟಿ, ಸಂಘಟನಾ ಸಂಚಾಲಕ ಶಿವಕುಮಾರ್ ಹೆಗಡೆ, ಬಸವರಾಜ ಕಟ್ಟಿ, ಮರೆಪ್ಪ ಹೋತಿನಮಡು, ಶ್ರೀನಾಥ್ ಕಟ್ಟಿಸಂಗಾವಿ, ದೇವರಾಜ್ ಬಣಮಿ ಸೇರಿದಂತ ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ಮೂಲಕ ಮನವಿ ಪತ್ರ ಸಲ್ಲಿಸಿದರು ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here