ಬೆಂಗಳೂರು: ಆಗಸ್ಟ್ ೨೫ ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಳೆ ಹಾನಿಗೆ ಸಂಬಂಧಿಸಿದಂತೆ ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ ಹಾಗೂ ಗದಗ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸುವ ಸಲುವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿಯವರ ಸಚಿವಾಲಯ ಪ್ರಕಟಣೆ ತಿಳಿಸಿದೆ.
ಅಂದು ಬೆಳಿಗ್ಗೆ ೯ ಗಂಟೆಗೆ ಹೆಚ್.ಎ.ಎಲ್ ವಿಮಾನ ನಿಲ್ದಾಣದ ಮೂಲಕ ಹೊರಡಲಿರುವ ಮುಖ್ಯಮಂತ್ರಿಗಳು ಬೆಳಗಾವಿ ಜಿಲ್ಲೆಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬೆಳಿಗ್ಗೆ ೧೦.೧೫ ಕ್ಕೆ ತಲುಪಲಿದ್ದಾರೆ. ಅಲ್ಲಿಯೇ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಸಚಿವರು, ಶಾಸಕರು, ಸಂಸತ್ ಸದಸ್ಯರು, ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಳೆ ಹಾನಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ತದನಂತರ ಮಧ್ಯಾಹ್ನ ೧೨.೩೦ ಕ್ಕೆ ವಿಜಯಪುರ ಜಿಲ್ಲೆಯ ಆಲಮಟ್ಟಿ ಅಣಿಕಟ್ಟು ಆವರಣದ ಹೆಲಿಪ್ಯಾಡ್‌ಗೆ ಆಗಮಿಸುವ ಅವರು ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಭೇಟಿ ನೀಡಿ ವಿಜಯಪುರ, ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳ ಸಚಿವರು, ಶಾಸಕರು, ಸಂಸತ್ ಸದಸ್ಯರು, ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಳೆ ಹಾನಿಗೆ ಸಂಬಂಧಿಸಿದಂತೆ ಆಲಮಟ್ಟಿ ಅತಿಥಿ ಗೃಹದ ಸಭಾಂಗಣದಲ್ಲಿ ಸಭೆ ನಡೆಸಿ, ೨.೩೦ಕ್ಕೆ ವೈಮಾನಿಕ ಸಮೀಕ್ಷೆ ನಡೆಸುವರು.
ಅಂದೇ ಮಧ್ಯಾಹ್ನ ೩.೪೫ ಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಸಂಜೆ ೫ ಗಂಟೆಗೆ ಹಿಂದಿರುಗಲಿದ್ದಾರೆ.
ಕೋವಿಡ್-೧೯ ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸದರಿ ಪ್ರವಾಸ ಕಾರ್ಯಕ್ರಮದಲ್ಲಿ ಅತಿ ಕಡಿಮೆ ಸಂಖ್ಯೆಯಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಭಾಗವಹಿಸುವ ಜೊತೆಗೆ ಕಡ್ಡಾಯವಾಗಿ ಮಾಸ್ಕ್‌ಗಳನ್ನು ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮುಖ್ಯಮಂತ್ರಿಗಳ ಸಚಿವಾಲಯದಿಂದ ಸೂಚಿಸಲಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…