ಕಲಬುರಗಿ: ಬೆರೆ ರಾಜ್ಯದ ಬೈಕ್ ಗಳನ್ನು ಕಳ್ಳತನ ಮಾಡಿ ಕಲಬುರಗಿಯಲ್ಲಿ ಮಾರಾಟ ಮಾಡುತ್ತಿದ್ದ ಮೂವರು ಅಂತರರಾಜ್ಯ ಕಳ್ಳರನ್ನು ಇಲ್ಲಿನ ನಿಂಬರ್ಗಾ ಪೊಲೀಸರು ಬಂಧಿಸಿ ಆರೋಪಿಗಳಿಂದ ಮೂರುವರೆ ಲಕ್ಷ ಮೌಲ್ಯದ ಬೈಕ್ಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.
ಹೈದ್ರಾಬಾದ್ ಮೂಲದ ಮಹಮ್ಮದ್ ಚೌಧರಿ (25), ಜಿಲಾನಿ (23) ಹಾಗೂ ಬಂದರವಾಡ ಗ್ರಾಮದ ನಿವಾಸಿ ಮಹಮ್ಮದ್ ಸೋಯಲ್ ಚೌಧರಿ (25) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಹೈದರಾಬಾದ್ನಲ್ಲಿ ಗ್ಯಾರೇಜ್ ಇಟ್ಟಿರುವ ಇಬ್ಬರು ಆರೋಪಿಗಳು ಬೈಕ್ ಗಳನ್ನು ಕದ್ದು, ನಂಬರ್ ಪ್ಲೇಟ್ ಬದಲಾಯಿಸಿ ಜಿಲ್ಲೆಯ ಸೋಹೆಲ್ ಸಹಾಯದಿಂದ ಜಿಲ್ಲೆಯಲ್ಲಿ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಬೈಕ್ ಗಳನ್ನು ಮಾರಾಟಕ್ಕೆಂದು ಬಂದಾಗ ನಿಂಬರ್ಗಾ ಪೊಲೀಸ್ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…