ಸುರಪುರ: ಪ್ರತಿ ವರ್ಷದಂತೆ ಈ ವರ್ಷವು ಅಕ್ಕನಾಗಮ್ಮನವರ ಮಠದ ಜಾತ್ರೆಯನ್ನು ಆಚರಿಸಲಾಗುತ್ತಿದೆ.ಆದರೆ ಈ ವರ್ಷ ವಿಶೇಷವಾಗಿ ಶಪಥ ಭಜನೆ ನಡೆಸುವ ಮೂಲಕ ಜಗತ್ತಿನಿಂದ ಕೊರೊನಾ ನಿರ್ಮೂಲನೆಗಾಗಿ ದೇವರಲ್ಲಿ ಪ್ರಾರ್ಥಿಸಲಾಗುತ್ತಿದೆ ಎಂದು ದೇವಿಂದ್ರಯ್ಯ ಸ್ವಾಮೀಜಿ ಮಾತನಾಡಿದರು.
ಚೆನ್ನಬಸವಣ್ಣನವರ ಪೀಠ ಹಾಲಬಾವಿಯ ಶಾಖಾಮಠ ಬೊಮ್ಮನಹಳ್ಳಿಯಲ್ಲಿನ ಅಕ್ಕಮನಾಗಮ್ಮನವರ ಮಠದ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಕಾರ್ಯಕ್ರಮಗಳ ನೇತೃತ್ವವಹಿಸಿ ಮಾತನಾಡಿ,ಪ್ರತಿ ವರ್ಷವು ಶ್ರಾವಣ ಮಾಸದ ಕೊನೆಯ ಸೋಮವಾರದ ನಂತರದ ಐದನೆ ದಿನದಂದು ಬೊಮ್ಮನಹಳ್ಳಿಯಲ್ಲಿ ಅಕ್ಕನಾಗಮ್ಮನವರ ಮಠದ ಜಾತ್ರೆಯನ್ನು ಆಚರಿಸಲಾಗುತ್ತದೆ.ಆದರೆ ಈ ವರ್ಷ ಜಗತ್ತಿಗೆ ಕಂಟಕವಾಗಿರುವ ಕೊರೊನಾ ವೈರಸ್ ಹಾವಳಿಯಿಂದಾಗಿ ಈ ವರ್ಷ ಸಾಂಕೇತಿಕ ಆಚರಣೆಗಳ ಮೂಲಕ ಸರಳವಾಗಿ ಜಾತ್ರೆ ಆಚರಿಸಲಾಗುತ್ತಿದೆ.ಅಲ್ಲದೆ ಈ ವರ್ಷ ವಿಶೇಷವಾಗಿ ಶಪಥ ಭಜನೆ ಮಾಡುವ ಮೂಲಕ ಕೊರೊನಾ ನಿರ್ಮೂಲನೆಗೆ ಪ್ರಾರ್ಥಿಸಲಾಗುತ್ತಿದೆ ಎಂದರು.
ಜಾತ್ರೆಯ ಅಂಗವಾಗಿ ಬೆಳಿಗ್ಗೆ ಅಕ್ಕನಾಗಮ್ಮನವರ ಗದ್ದುಗೆಗೆ ಪೂಜೆ ಸಲ್ಲಿಸಲಾಯಿತು.ನಂತರ ಪುರವಂತರ ಮೇಳದೊಂದಿಗೆ ಪಲ್ಲಕ್ಕಿ ಮೆರವಣಿಗೆ ನಡೆಯಿತು.ನಂತರ ಶಪಥ ಭಜನೆ ನಡೆಸಲಾಯಿತು.ಕಾರ್ಯಕ್ರಮದಲ್ಲಿ ಗವಿಸಿದ್ದೇಶ್ವರ ಸ್ವಾಮೀಜಿ,ಚೆನ್ನಬಸವಣ್ಣ ಸ್ವಾಮೀಜಿ,ಅಮರಯ್ಯ ಸ್ವಾಮೀಜಿ ಜಾಲಿಬೆಂಚಿ ಸೇರಿದಂತೆ ಗ್ರಾಮದ ಅನೇಕ ಮುಖಂಡರು ಮತ್ತು ಭಕ್ತಾದಿಗಳು ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…