ಶಹಾಪುರ: ತಾಲೂಕಿನಾದ್ಯಂತ ನಕಲಿ ಬೀಜ ಗೊಬ್ಬರ ಹಾವಳಿಗೆ ರೈತರು ಕಂಗಾಲಾಗಿ ಹೋಗಿದ್ದಾರೆ ಆದ್ದರಿಂದ ಸಂಬಂಧಪಟ್ಟ ಕೃಷಿ ಅಧಿಕಾರಿಗಳು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ರಾದ ಮಹೇಶಗೌಡ ಸುಬೇದಾರ ಮನವಿ ಮಾಡಿಕೊಂಡಿದ್ದಾರೆ.
ಗ್ರಾಮೀಣ ಭಾಗದ ರೈತರು ಈಗಾಗಲೇ ಸಾಲದ ಸುಳಿಯಲ್ಲಿ ಸಿಲುಕಿ ಜೀವನ ಅತಂತ್ರದಲ್ಲಿರುವ ಸಂದರ್ಭದಲ್ಲಿ ನಕಲಿ ಬೀಜ ಗೊಬ್ಬರ ಮಾರಾಟ ಮಾಡಿ ಮುಗ್ಧ ರೈತರಿಗೆ ಮೋಸ ಮಾಡಲಾಗುತ್ತಿದೆ.ಕೆಲವೊಂದು ಮಿಕ್ಸಾರ ಹಾಗೂ ಇನ್ನಿತರ ಕಂಪನಿಗಳ ಬೀಜ ಮತ್ತು ಗೊಬ್ಬರಗಳ ನಕಲಿಯಾಗಿ ರುವುದರಿಂದ ಕೂಡಲೇ ರದ್ದುಗೊಳಿಸಿ ಮಾರಾಟ ಮಾಡುವುದಕ್ಕೆ ನಿಷೇಧಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ರೈತ ಈಗಾಗಲೇ ಕೋರೋನಾ ಹಾಗೂ ಅತಿವೃಷ್ಟಿಯ ಸಂಕಷ್ಟದಲ್ಲಿರುವಾಗಲೇ ತಾಲೂಕಿನಾದ್ಯಂತ ನಕಲಿ ಬಿತ್ತನೆ ಬೀಜಗಳ ಮಾರಾಟ ಜಾಲಾ ಸಕ್ರಿಯವಾಗಿರುವುದರಿಂದ ಕೂಡಲೇ ಇದಕ್ಕೆ ಕಡಿವಾಣ ಹಾಕಬೇಕೆಂದು ಈ ಮೂಲಕ ಸರಕಾರಕ್ಕೆ ಒತ್ತಾಯಿಸಲಾಯಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…