ಶಹಾಪುರ: ನಮ್ಮ ಭಾರತ ದೇಶ ಜಾತ್ಯತೀತವಾಗಿದ್ದು ನಮ್ಮ ಸಂವಿಧಾನ ಎಲ್ಲ ಧರ್ಮಗಳನ್ನು ಸಮಾನ ರೀತಿ ಕಾಣುವಂತೆ ಸೂಚಿಸುತ್ತದೆ,ಆದ್ದರಿಂದ ಹಿಂದೂ,ಮುಸ್ಲಿಂ,ಕ್ರೈಸ್ತ, ಎಲ್ಲರೂ ಸೇರಿ ನಾನಾ ಧರ್ಮೀಯರು ಅನ್ಯ ಧರ್ಮದ ಆಚರಣೆಗಳನ್ನು ಗೌರವದಿಂದ ಕಾಣಬೇಕು ಎಂದು ಶಹಾಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಚೆನ್ನಯ್ಯ ಹಿರೇಮಠ ಹೇಳಿದರು.
ತಾಲೂಕಿನ ದೋರನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಮೊಹರಂ ಹಬ್ಬದ ಅಂಗವಾಗಿ ಏರ್ಪಡಿಸಿರುವ ಶಾಂತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಕಾಂಗ್ರೆಸ್ ಯುವ ಮುಖಂಡ ನಿಜಗುಣ ಪೂಜಾರಿ ದೋರನಹಳ್ಳಿ ಮಾತನಾಡಿ ಶಾಂತಿ ಸೌಹಾರ್ದದಿಂದ ಹಬ್ಬ ಆಚರಿಸಬೇಕು ಯಾವುದೆ ಅಹಿತಕರ ಘಟನೆಗಳಿಗೆ ಆಸ್ಪದ ಕೊಡಬಾರದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಣಮಂತ ಕಸನ್,ಖಾಜೇಸಾಬ್ ಮಠ್, ಮಹಾದೇವಪ್ಪ ಹುಡೇದ್, ಶರಣು ದೋರನಹಳ್ಳಿ, ಅಲ್ಲಿಸಾಬ್ ಗೋಗಿ,ಗಫೂರ್ ಸಾಬ್ ಗೋಗಿ,ಮಾನಪ್ಪ ಹುಲಸೂರು,ಮಹಮ್ಮದ್ ಸಾಬ್ ಮಸಾಯಿ,ಚಂದ್ರಾಮ ಕೊಂಬಿನ್,ಬಾಸು ಅರ್ಜುಣಗಿ ಹಾಗೂ ಎಲ್ಲಾ ಧರ್ಮದ ಹಿರಿಯರು ಹಾಗೂ ಇತರರು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…