ಬಿಸಿ ಬಿಸಿ ಸುದ್ದಿ

ರೈತರ ಸಾಲವನ್ನು ತ್ವರಿತವಾಗಿ ಮಂಜೂರು ಮಾಡಲು ಲೋಕ ಜನಶಕ್ತಿ ಮುಖಂಡರ ಆಗ್ರಹ

ಸುರಪುರ: ಈ ಮುಂಚೆ ರೈತರು ಹಾಗು ಇತರೆ ಯಾವುದೇ ತರಹದ ಸಾಲವನ್ನು ಸ್ಥಳಿಯ ಶಾಖೆಗಳಲ್ಲಿಯೆ ಅರ್ಜಿ ಪಡೆದು ಮಂಜೂರು ಮಾಡಲಾಗುತ್ತಿತ್ತು.ಆದರೆ ಈಗ ಸಾಲಕೆಕ ಅರ್ಜಿ ಪಡೆದು ಯದಗಿರಿಗೆ ಅರ್ಜಿ ಕಳುಹಿಸಿ ಮಂಜೂರು ಪಡೆಯುವ ಪದ್ಧತಿಯಿಂದ ರೈತರಿಗೆ ತೊಂದರೆಯಾಗುತ್ತಿದೆ ಎಂದು ಲೋಕ ಜನಶಕ್ತಿ ಪಕ್ಷದ ಜಿಲ್ಲಾಧ್ಯಕ್ಷ ರಾಜಾ ಅಪ್ಪಾರಾವ್ ನಾಯಕ ಆರೋಪಿಸಿದರು.

ನಗರದ ರಂಗಂಪೇಟೆಯ ಎಸ್‌ಬಿಐ ಶಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿ,ರೈತರು ಅವಶ್ಯಕತೆಯಿರುವಾಗ ಬಂದು ಸಾಲಕ್ಕೆ ಅರ್ಜಿ ಸಲ್ಲಿಸುತ್ತಾರೆ.ಆದರೆ ತಾವು ರೈತರ ಅರ್ಜಿಯನ್ನು ಯಾದಗಿರಿಗೆ ಕಳುಹಿಸಿ ಅನುಮೋದನೆ ಪಡೆಯುವ ಹೊಸ ಪದ್ಧತಿ ಜಾರಿಗೊಳಿಸಿರುವಿರಿ,ಇದರಿಂದ ಅನೇಕ ದಿನಗಳ ಸಮಯ ತಗಲುವುದರಿಂದ ರೈತರಿಗೆ ಅವಶ್ಯವಿರುವಾಗ ಸಾಲ ದೊರೆಯದೆ ಸಂಕಷ್ಟಕ್ಕೆ ಸಿಲುಕಲಿದ್ದಾರೆ.

ಇದರಿಂದ ರೈತರಿಗೆ ಸಾಲ ಅನುಕೂಲವಾಗದೆ ಅನಾನುಕೂಲಕ್ಕೆ ದಾರಿ ಮಾಡಲಿದೆ.ಆದ್ದರಿಂದ ರೈತರ ಮತ್ತಿತರೆ ಯಾರದೇ ಆಗಲಿ ಸಾಲದ ಅರ್ಜಿ ಯಾದಗಿರಿಗೆ ಕಳುಹಿಸಿ ಸಮಯ ವಿಳಂಬ ಮಾಡದೆ ಈ ಮುಂಚೆಯಂತೆ ಇಲ್ಲಿಯೆ ಮಂಜೂರು ಮಾಡುವ ಮೂಲಕ ರೈತರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಮನವಿ ಮಾಡಿದ್ದು ಒಂದು ವೇಳೆ ನಮ್ಮ ಮನವಿಗೆ ಸ್ಪಂಧಿಸದಿದ್ದಲ್ಲಿ ಬ್ಯಾಂಕ್ ಶಾಖೆಯ ಮುಂದೆ ರೈತರೊಂದಿಗೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿ ಬ್ಯಾಂಕ್ ವ್ಯವಸ್ಥಾಪಕ ದಿನಕರಬಾಬು ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ರೈತರಾದ ಸಿದ್ದಪ್ಪ ಕಮತಗಿ ಹೆಮನೂರ ಚಿನ್ನಪ್ಪ ತಳ್ಳಳ್ಳಿ ಭೀಮಣ್ಣ ನಾಗರಾಳ ಪಕ್ಷದ ತಾಲೂಕು ಅಧ್ಯಕ್ಷ ಹೈಯಳದಪ್ಪ ವನಕೇರಿ ಧನಂಜಯ ಫೀಲ್ಡ್ ಆಫೀಸರ್ ಸೇರಿದಂತೆ ಅನೇಕರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

5 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

7 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

14 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

14 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

15 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago