ಬೆಂಗಳೂರು: ಕೊರೋನಾ ಸೋಂಕಿತರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಅನೇಕ ಹಿರಿಯ ಕಾಂಗ್ರೆಸ್ ಮುಖಂಡರು ದೂರವಾಣಿ ಕರೆ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.
ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಿ.ಕೆ ಶಿವಕುಮಾರ್ ಅವರಿಗೆ ಸೋನಿಯಾ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಅನೇಕ ಎಐಸಿಸಿ ಮುಖಂಡರು ಮಂಗಳವಾರ ಮಧ್ಯಾಹ್ನ ದೂರವಾಣಿ ಕರೆ ಮಾಡಿ, ಆರೋಗ್ಯ ಕ್ಷೇಮ ವಿಚಾರಿಸಿದರು. ಆದಷ್ಟು ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.