ನಾಳೆ ಶಹಾಪುರಕ್ಕೆ ನಳಿನ್ ಕುಮಾರ ಕಟೀಲ್

0
59

ಯಾದಗಿರಿ : ರಾಜಕೀಯ ವಿದ್ಯಮಾನಗಳ ಕುರಿತು ಹಾಗೂ ಪಕ್ಷ ಸಂಘಟನೆಗಾಗಿ ಬಿಜೆಪಿಯ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ನಾಳೆ ಶಹಾಪುರ ನಗರಕ್ಕೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಡಾ:ಶರಣಬೊಪಾರೆಡ್ಡಿ ನಾಯ್ಕಲ್ ತಿಳಿಸಿದ್ದಾರೆ.

ಸಭೆಯನ್ನು ಶಹಾಪುರದ ಬೀದರ್ ಬೆಂಗಳೂರು ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಮೋಟಗಿ ರೆಸಿಡೆನ್ಸಿಯಲ್ಲಿ ಸಭೆಯನ್ನು ಹಮ್ಮಿಕೊಂಡಿದ್ದು ಈ ಸಭೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಬರುವಂತೆ ಪಕ್ಷದ ಕಾರ್ಯಕರ್ತರಿಗೆ ಹಾಗೂ ಮುಖಂಡರುಗಳಿಗೆ ತಿಳಿಸಿದ್ದಾರೆ.

Contact Your\'s Advertisement; 9902492681

ಮಧ್ಯಾಹ್ನ 1 ಗಂಟೆಗೆ ಸಭೆ ಪ್ರಾರಂಭವಾಗಿ 3 ಗಂಟೆಯ ಸುಮಾರಿಗೆ ಮುಕ್ತಾಯಗೊಳಿಸಿ ಮುಂದಿನ ಕಾರ್ಯಕ್ರಮಕ್ಕೆ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ಅವರು ನಿರ್ಗಮಿಸುವರು ಎಂದು ತಿಳಿದು ಬಂದಿದೆ. ಪಕ್ಷದ ಹಿತೈಷಿಗಳು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here