ಬೆಂಗಳೂರು: 2019-20ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲಾವಾರು ಪ್ರಥಮ ಸ್ಥಾನ ಪಡೆದ ಪರಿಶಿಷ್ಟ ಜಾತಿ-ಪಂಗಡದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಒಂದು ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುತ್ತಿದೆ.
ಸ್ವಾತಂತ್ರ್ಯ ಹೋರಾಟದ ಭಾಗವಾದ ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಇವರ ಹೆಸರಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಂದು ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಈ ಹಣವನ್ನು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ಈ ಸಂಬಂಧ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಅಗತ್ಯ ಇರುವುದಿಲ್ಲ.
ಇದೇ ರೀತಿಯಲ್ಲಿ ಎಸೆಸೆಲ್ಸಿಯಲ್ಲಿ ಶೇ.60 ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ 7ಸಾವಿರ ರೂ. ಹಾಗೂ ಶೇ.75ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ 15 ಸಾವಿರ ರೂ.ಪ್ರೋತ್ಸಾಹ ಧನ ನೀಡಲಾಗುತ್ತದೆ. ಈ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಅವರ ಬ್ಯಾಂಕ್ ಖಾತೆಗಳಿಗೆ ಹಣ ಜಮೆ ಮಾಡಲಾಗುತ್ತದೆ.
ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಹಾಗೂ ತಾಂತ್ರಿಕ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವನ್ನು ಸಮಾಜ ಕಲ್ಯಾಣ ಇಲಾಖೆ ಸಂಬಂಧಪಟ್ಟ ಜಿಲ್ಲಾ ಮಟ್ಟದ ಕಚೇರಿಯಿಂದ ಪಾವತಿ ಮಾಡಲಾಗುತ್ತದೆ.
ವಿದ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ನ.30 ಕೊನೆಯ ದಿನವಾಗಿರುತ್ತದೆ. ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ www.sw.jar.nic.in ನ್ನು ವೀಕ್ಷಿಸಬಹುದು ಹಾಗೂ ಆಯಾ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ತಾಲೂಕು, ಜಿಲ್ಲಾ ಮಟ್ಟದ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದೆಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…