ಬೆಂಗಳೂರು: ಅನುದಾನರಹಿತ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ, ಆರ್ ಟಿಇ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸರಕಾರವನ್ನು ಒತ್ತಾಯಿಸಿದ್ದಾರೆ.
ಬುಧವಾರ ಶಿಕ್ಷಕರ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ನಗರದ ಮೌರ್ಯವೃತ್ತದ ಬಳಿ ವಿಧಾನಪರಿಷತ್ ಸದಸ್ಯರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಖಾಸಗಿ ಶಾಲಾ ಶಿಕ್ಷಕರ ನೆರವಿಗೆ ರಾಜ್ಯ ಸರಕಾರ ಕೂಡಲೇ ಧಾವಿಸಬೇಕು. ಈ ವಿಷಯವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿದ್ದೇನೆ. ಬೇಕಾದರೆ ಮತ್ತೊಂದು ಪತ್ರ ವನ್ನು ಬರೆದು ಒತ್ತಾಯಿಸುತ್ತೇನೆಂದು ತಿಳಿಸಿದರು.
ಕೋವಿಡ್ ಸಂದರ್ಭದಲ್ಲಿ ಶಿಕ್ಷಕರು ಕೆಲಸವಿಲ್ಲದೆ, ಸಂಬಳವಿಲ್ಲದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಇವರಿಗೆ ನೆರವಾಗುವ ಮೂಲಕ ರಾಜ್ಯ ಸರಕಾರ ಮಾನವೀಯತೆ ಪ್ರದರ್ಶಿಸಬೇಕು. ಖಾಸಗಿ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಿಸುವ ನಿಟ್ಟಿನಲ್ಲಿ ಮುಂದಿನ ಸಂಸರ್ ಅಧಿವೇಶನದಲ್ಲಿ ಕೇಂದ್ರ ಸರಕಾರದ ಗಮನಕ್ಕೂ ತರುತ್ತೇನೆಂದು ಅವರು ಹೇಳಿದರು.
ಕೇಂದ್ರ ಸರಕಾರ ಅನುಮೋಧಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಗೆ ನಮ್ಮ ವಿರೋಧವಿದೆ. ಒಕ್ಕೂಟ ವ್ಯವಸ್ಥೆಯನ್ನು ಒಳಗೊಂಡಿರುವ ದೇಶದಲ್ಲಿ ಕೇಂದ್ರ ಸರಕಾರ ಏಕರೂಪ ಶಿಕ್ಷಣವನ್ನು ಜಾರಿಗೆ ತರಲು ಹೊರಟಿದೆ. ಇದರಿಂದ ಯಾರಿಗೂ ಉಪಯೋಗವಿಲ್ಲವೆಂದು ಅವರು ಹೇಳಿದರು.
ಪ್ರತಿಭಟನೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಪರಿಷತ್ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ,ಬೋಜೇಗೌಡ, ಕೆ.ಟಿ.ಶ್ರೀಕಂಠೇಗೌಡ, ತಿಪ್ಪೇಸ್ವಾಮಿ, ಮಾಜಿ ಪರಿಷತ್ ಸದಸ್ಯ ಟಿ.ಎ.ಶರವಣ ಮತ್ತಿತರರು ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…