ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಜಯಕರ್ನಾಟಕ ಒತ್ತಾಯ

1
38

ಸುರಪುರ: ಬೆಳಗಾವಿ ಜಿಲ್ಲೆಯ ಪೀರನವಾಡಿಯಲ್ಲಿ ಸ್ಥಾಪಿಸಲಾಗಿದ್ದ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನವರ ಮೂರ್ತಿಯನ್ನು ತೆರವುಗೊಳಿಸಿರುವು ಸಂಗೊಳ್ಳಿ ರಾಯಣ್ಣನವರಿಗೆ ಸರಕಾರ ಮಾಡಿದ ಅವಮಾನವಾಗಿದೆ ಎಂದು ಜಯಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ರವಿಕುಮಾರ ನಾಯಕ ಆಕ್ರೋಶ ವ್ಯಕ್ತಪಡಿಸಿದರು.

ನಗರದ ತಹಸೀಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮಾತನಾಡಿ,ಸಂಗೊಳ್ಳಿ ರಾಯಣ್ಣ ಈ ದೇಶಕ್ಕೆ ಸ್ವಾತಂತ್ರ್ಯ ದೊರೆಯಲೆಂದು ಬ್ರಿಟೀಷರ ವಿರುಧ್ಧ ಹೋರಾಡಿದ ಹುತಾತ್ಮ ಅಂತಹ ರಾಯಣ್ಣನವರ ಮೂರ್ತಿಯನ್ನು ಅವರದೆ ನೆಲವಾದ ಬೆಳಗಾವಿ ಜಿಲ್ಲೆಯ ಪೀರನವಾಡಿಯಲ್ಲಿ ತೆರವುಗೊಳಿಸಿರುವುದು ಅಕ್ಷಮ್ಯ ಅಪರಾಧವಾಗಿದೆ.ಸರಕಾರ ಮೂರ್ತಿ ತೆರವುಗೊಳಿಸುವ ಮೂಲಕ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುವುದಷ್ಟೆ ಅಲ್ಲದೆ ಕೋಟ್ಯಾಂತರ ಜನ ಅವರ ಅಭಿಮಾನಿಗಳಿಗೆ ಅಪಮಾನಿಸಿದಂತಾಗಿದೆ.ಆದ್ದರಿಂದ ಸರಕಾರ ಕೂಡಲೆ ಪೀರನವಾಡಿಯನ್ನು ಸಂಗೊಳ್ಳಿ ರಾಯಣ್ಣನವರ ಮೂರ್ತಿ ಪ್ರತಿಷ್ಠಾಪಿಸಬೇಕು ಇಲ್ಲವಾದಲ್ಲಿ ಜಯಕರ್ನಾಟಕ ಸಂಘಟನೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.

Contact Your\'s Advertisement; 9902492681

ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಗ್ರೇಡ-2 ತಹಸೀಲ್ದಾರ್ ಸೂಫಿಯಾ ಸುಲ್ತಾನ ಅವರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘಟನೆ ಕಾರ್ಯಾಧ್ಯಕ್ಷ ಶರಣಪ್ಪ ಬೈರಿಮರಡಿ ನಗರಾಧ್ಯಕ್ಷ ಮಲ್ಲಪ್ಪ ನಾಯಕ ನಗರ ಕಾರ್ಯಾಧ್ಯಕ್ಷ ಯಲ್ಲಪ್ಪ ಕಲ್ಲೋಡಿ ರಾಘವೇಂದ್ರ ಗೋಗಿಕರ್ ಬಸವರಾಜ ಶಖಾಪುರ ದೇವು ನಾಯಕ ಜಾಲಿಬೆಂಚಿ ಮೌನೇಶ ದಳಪತಿ ಹಣಮಗೌಡ ಶಖಾಪುರ ಸೇರಿದಂತೆ ಅನೇಕರಿದ್ದರು.

1 ಕಾಮೆಂಟ್

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here