ಐರಾವತ ಮೂಲಕ ಸಾಮಾಜಿಕ ಹಾಗೂ ಆರ್ಥಿಕ ಚೈತನ್ಯ: ಸಚಿವ ಪ್ರಿಯಾಂಕ್ ಖರ್ಗೆ

0
347

ಬೆಂಗಳೂರು: ಐರಾವತ ಯೋಜನೆಯಡಿ ಫಲಾನುಭವಿಗಳಿಗೆ 5 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುತ್ತಿದ್ದು, ಚಾಲಕರೇ ಮಾಲೀಕರಾಗಿ ಬದಲಾವಣೆಯಾಗುತ್ತಿದ್ದಾರಲ್ಲದೆ, ಅವರ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿಗಳಲ್ಲಿ ಸಾಕಷ್ಟು ಅಭಿವೃದ್ಧಿಯಾಗಲಿದೆ ಹಾಗೂ ಮಕ್ಕಳ ವಿದ್ಯಾಭ್ಯಾಸ ಹಾಗೂ ಜೀವನಮಟ್ಟದಲ್ಲಿ ಸಾಕಷ್ಟು ಸುಧಾರಣೆಯಾಗಲಿದೆ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ‘ಐರಾವತ’ ಯೋಜನೆಯಡಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿ ಇಂದು ಮೇ 30 (ಗುರುವಾರ) ನಡೆದ ಕಾರ್ಯಕ್ರಮದಲ್ಲಿ 209 ಮಂದಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ವಾಹನಗಳನ್ನು  ವಿತರಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಬ್ಯಾಂಕುಗಳಿಂದ ಸಾಲ ಪಡೆದು, ಪ್ರತಿ ಮಾಹೆ ಕಂತು ಪಾವತಿಸುವಂತಹ ಸ್ಥಿತಿಯಿಂದ ದೂರಾಗಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಐರಾವತ ನೆರವಾಗಿದೆ, ಸಮಾಜದ ದುರ್ಬಲ ವರ್ಗದವರ ಆರ್ಥಿಕ ಸದೃಢತೆಗೆ ಪೂರಕವಾಗಿ ಈ ಯೋಜನೆಯನ್ನು ರೂಪಿಸಲಾಗಿದ್ದು, ಈ ಯೋಜನೆಯಿಂದ ಉದ್ಯೋಗಿಗಳೇ ಮಾಲೀಕರಾಗಲಿದ್ದಾರೆ ಎಂದು ತಿಳಿಸಿದರು.

ಈಗಾಗಲೆ ಐರಾವತ ಯೋಜನೆಯ ಸೌಲಭ್ಯ ಪಡೆದಿರುವ ಹಲವಾರು ಫಲಾನುಭವಿಗಳು ಬದ್ಧತಾಪೂರ್ಣವಾಗಿ ದುಡಿದು, ಮಾಸಿಕ 90,000 ರೂ. ಆದಾಯ ಗಳಿಸಿರುವ ಬಗ್ಗೆ ಓಲಾ ಕಂಪೆನಿ ಇಲಾಖೆಗೆ ವರದಿ ಮಾಡಿದೆ, ಇದರಿಂದ ಈ ಯೋಜನೆಯ ದೂರದೃಷ್ಟಿಯ ಅರಿವಾಗುವುದು ಎಂದೂ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಹೇಳಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ನಿರುದ್ಯೋಗಿ ಯುವಕ/ಯುವತಿಯರನ್ನು ಉದ್ಯಮ ಶೀಲರನ್ನಾಗಿ ಮಾಡುವ ಉದ್ದೇಶದಿಂದ ಸಾಮಾಜಿಕ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯನ್ನು ಡಾ: ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮಗಳ ಮೂಲಕ ಅನುಷ್ಟಾನಗೊಳಿಸಲಾಗುತ್ತಿದೆ.

ಐರಾವತ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 200 ಕೋಟಿ ರೂ.ವೆಚ್ಚದಲ್ಲಿ 4500 ಮಂದಿಗೆ ವಾಹನಗಳನ್ನು ಓಲಾ/ಊಬರ್ ಸಂಸ್ಥೆಗಳ ಸಹಯೋಗದೊಂದಿಗೆ ನೀಡಲಾಗುತ್ತಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here