ಬೆಂಗಳೂರು: ಐರಾವತ ಯೋಜನೆಯಡಿ ಫಲಾನುಭವಿಗಳಿಗೆ 5 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುತ್ತಿದ್ದು, ಚಾಲಕರೇ ಮಾಲೀಕರಾಗಿ ಬದಲಾವಣೆಯಾಗುತ್ತಿದ್ದಾರಲ್ಲದೆ, ಅವರ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿಗಳಲ್ಲಿ ಸಾಕಷ್ಟು ಅಭಿವೃದ್ಧಿಯಾಗಲಿದೆ ಹಾಗೂ ಮಕ್ಕಳ ವಿದ್ಯಾಭ್ಯಾಸ ಹಾಗೂ ಜೀವನಮಟ್ಟದಲ್ಲಿ ಸಾಕಷ್ಟು ಸುಧಾರಣೆಯಾಗಲಿದೆ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಸಮಾಜ ಕಲ್ಯಾಣ ಇಲಾಖೆಯ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ‘ಐರಾವತ’ ಯೋಜನೆಯಡಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿ ಇಂದು ಮೇ 30 (ಗುರುವಾರ) ನಡೆದ ಕಾರ್ಯಕ್ರಮದಲ್ಲಿ 209 ಮಂದಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ವಾಹನಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಬ್ಯಾಂಕುಗಳಿಂದ ಸಾಲ ಪಡೆದು, ಪ್ರತಿ ಮಾಹೆ ಕಂತು ಪಾವತಿಸುವಂತಹ ಸ್ಥಿತಿಯಿಂದ ದೂರಾಗಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಐರಾವತ ನೆರವಾಗಿದೆ, ಸಮಾಜದ ದುರ್ಬಲ ವರ್ಗದವರ ಆರ್ಥಿಕ ಸದೃಢತೆಗೆ ಪೂರಕವಾಗಿ ಈ ಯೋಜನೆಯನ್ನು ರೂಪಿಸಲಾಗಿದ್ದು, ಈ ಯೋಜನೆಯಿಂದ ಉದ್ಯೋಗಿಗಳೇ ಮಾಲೀಕರಾಗಲಿದ್ದಾರೆ ಎಂದು ತಿಳಿಸಿದರು.
ಈಗಾಗಲೆ ಐರಾವತ ಯೋಜನೆಯ ಸೌಲಭ್ಯ ಪಡೆದಿರುವ ಹಲವಾರು ಫಲಾನುಭವಿಗಳು ಬದ್ಧತಾಪೂರ್ಣವಾಗಿ ದುಡಿದು, ಮಾಸಿಕ 90,000 ರೂ. ಆದಾಯ ಗಳಿಸಿರುವ ಬಗ್ಗೆ ಓಲಾ ಕಂಪೆನಿ ಇಲಾಖೆಗೆ ವರದಿ ಮಾಡಿದೆ, ಇದರಿಂದ ಈ ಯೋಜನೆಯ ದೂರದೃಷ್ಟಿಯ ಅರಿವಾಗುವುದು ಎಂದೂ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಹೇಳಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ನಿರುದ್ಯೋಗಿ ಯುವಕ/ಯುವತಿಯರನ್ನು ಉದ್ಯಮ ಶೀಲರನ್ನಾಗಿ ಮಾಡುವ ಉದ್ದೇಶದಿಂದ ಸಾಮಾಜಿಕ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯನ್ನು ಡಾ: ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮಗಳ ಮೂಲಕ ಅನುಷ್ಟಾನಗೊಳಿಸಲಾಗುತ್ತಿದೆ.
ಐರಾವತ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 200 ಕೋಟಿ ರೂ.ವೆಚ್ಚದಲ್ಲಿ 4500 ಮಂದಿಗೆ ವಾಹನಗಳನ್ನು ಓಲಾ/ಊಬರ್ ಸಂಸ್ಥೆಗಳ ಸಹಯೋಗದೊಂದಿಗೆ ನೀಡಲಾಗುತ್ತಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…