ಬಳ್ಳಾರಿ: ಜಿಲ್ಲೆಯ ಹೊಸಪೇಟೆ ನಗರದಲ್ಲಿರುವ ಇಕ್ವಿಟಾಸ್ ಸ್ಮಾಲ್ ಫೈನಾನ್ಸ್ ಪ್ರವೈಟ್ ಲಿಮಿಟೆಡ್ ಎಂಬ ಖಾಸಗಿ ಬ್ಯಾಂಕಿನಲ್ಲಿ ಕಾನೂನು ಸಲಹೆಗಾರನಾಗಿ ಕಾರ್ಯನಿರ್ವಹಿಸುತ್ತಿದ್ದ ವಕೀಲರಾದ ಬಿ.ಎಂ. ಮಹೇಶ್ ಸಾವಿಗೆ ಕುರಿತು ತನಿಖೆ ನಡೆಸಿ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ ಪರಿಹಾರ ಒದಗಿಸಬೇಕೆಂದು ಭಾರತೀಯ ದಲಿತ ಪ್ಯಾಂಥರ್ ಸಂಘಟನೆ ಕಾರ್ಯಕರ್ತರು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ.
ಈ ವೇಳೆಯಲ್ಲಿ ಸಂಘಟನೆ ಅಧ್ಯಕ್ಷರಾದ ಮೋಹನ್ ಕುಮಾರ್ ದಾಣಪ್ಪ ಮಾತನಾಡಿ, ಖಾಸಗಿ ಬ್ಯಾಂಕ್ ರದ್ದು ಪಡಿಸಬೇಕು, ಅಕ್ರಮ ನಡೆಸುವಂತೆ ಒತ್ತಡ ಹೇರಿ ಕಿರುಕುಳ ನೀಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಆತ್ಮಹತ್ಯೆಗೆ ಕಾರಣವಾದ ಮರಣ ಪತ್ರದಲ್ಲಿ ಉಲ್ಲೇಖಿಸಿರುವ ವ್ಯಕ್ತಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಸಂಘಟನೆಯ ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ದಾನಪ್ಪ ನೇತೃತ್ವದಲ್ಲಿ ಕಂಪ್ಲಿ ತಹಶೀಲ್ ಕಚೇರಿ ಎದುರು ಪ್ರತಿಭಟನೆ ನಡೆಸಿ ನಂತರ ಮುಖ್ಯ ಮಂತ್ರಿ, ಗ್ರಹ ಸಚಿವರು, ಪೊಲೀಸ್ ಡಿಜಿ & ಐಜಿಪಿ, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ತಾಲೂಕು ಕಚೇರಿಯ ಶಿರಸ್ತೆದಾರರಾದ ಮುಖಾಂತರ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ಪ್ರಧಾನ ಕಾರ್ಯದರ್ಶಿ, ನ್ಯಾಯವಾದಿ ಕೆ.ಶಿವ ಕುಮಾರ್ ಹಾಗೂ ಸಂಘಟನೆಯ ಪ್ರಮುಖರಾದ ಸೈಯದ್ ವಾರೀಶ್. ಎನ್, ಮನೋಜ್ ಕುಮಾರ್ ಡಿ, ಪಿ.ಸಿ.ಈರಣ್ಣ.ಎಸ್.ಕೆ.ಮಲ್ಲಿಕಾರ್ಜುನ, ಹೆಚ್ ವೆಂಕಟೇಶ್,ಮುತ್ತುರಾಜ್ ಸಂಕಲ್ಪ ಪಟ್ಟಣಶೆಟ್ಟಿ ಪಾಲ್ಗೊಂಡಿದ್ದರು.