ಶಹಾಬಾದ:ನಗರದ ಬೀದಿ ನಾಯಿಗಳ ದಾಳಿಗೆ ಇಬ್ಬರು ಬಾಲಕರು ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ ಸಾಯಂಕಾಲ ನಡೆದಿದೆ.ವಾರ್ಡ ನಂ.27 ರಲ್ಲಿ ಬೀದಿ ನಾಯಿಗಳು ಮನೆಯ ಮುಂದೆ ಕುಳಿತ ಬಾಲಕರ ಮೇಲೆ ದಾಳಿ ನಡೆಸಿ ಕೈಯಿಗೆ, ಹಾಗೂ ಹೊಟ್ಟೆಗೆ ಕಚ್ಚಿ ಗಾಸಿಗೊಳಿಸಿವೆ. ಘಟನೆಯಿಂದ ಇಬ್ಬರು ಬಾಲಕರು ಗಾಯಗೊಂಡಿದ್ದು, ಇವರನ್ನು ನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ನಿರ್ಲಕ್ಷ್ಯ ತೋರುತ್ತಿರುವ ನಗರಸಭೆ: ಬೀದಿನಾಯಿಗಳನ್ನು ನಿಯಂತ್ರಿಸಲು ಹಲವಾರು ಬಾರಿ ನಗರಸಭೆಯ ಸದಸ್ಯರು ಹಾಗೂ ಸಾರ್ವಜನಿಕರು ಮನವಿ ಸಲ್ಲಿಸಿದ್ದಾರೆ.ಈಗಾಗಲೇ ನಿರಂತರವಾಗಿ ನಾಯಿ ಕಡಿತದಿಂದ ಗಂಭೀರವಾಗಿ ಹಲವಾರು ಗಾಯಗಳಾದ ಘಟನೆಗಳು ನಡೆದಿದ್ದು, ಆ ಬಗ್ಗೆಯೂ ತಿಳಿಸಿಲಾಗಿದೆ.ಆದರೆ ನಗರಸಭೆಯ ಅಧಿಕಾರಿಗಳು ನಿಯಂತ್ರಿಸಲು ಸಾಧ್ಯವಾಗದೇ ಅಸಹಾಯಕರಾಗಿ ಕೈ ಚೆಲ್ಲಿ ಕುಳಿತ್ತಿದ್ದಾರೆ ಎಂದು ಮುಖಂಡ ಇಮ್ರಾನ್ ಆರೋಪಿಸಿದ್ದಾರೆ. ನಗರಸಭೆಯ ಆಡಳಿತ ವರ್ತನೆಯಿಂದ ಬೇಸತ್ತ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…