ಕಲಬುರಗಿ: ರೋಗಗ್ರಸ್ತ ಜಾನುವಾರುಗಳ ಚಿಕಿತ್ಸೆಗೆ ನೀಡುವ ಸುಸಜ್ಜಿತ ಪಶು ಚಿಕಿತ್ಸಾ ವಾಹನ (ಅಂಬುಲೆನ್ಸ್ ವಾಹನಕ್ಕೆ) ಗುರುವಾರ ಕಲಬುರಗಿಯಲ್ಲಿ ಪಶುಸಂಗೋಪನೆ, ಹಜ್ ಹಾಗೂ ವಕ್ಫ್ ಸಚಿವ ಪ್ರಭು ಚವ್ಹಾಣ್ ಅವರು ಹಳೇ ಐವಾನ –ಎ-ಶಾಹಿ ಅತಿಥಿಗೃಹದಲ್ಲಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ರೈತರ ಮನೆ ಬಾಗಿಲಿಗೆ ಹೋಗಿ ಜಾನುವಾರುಗಳಿಗೆ ಪಶು ವೈದ್ಯಕೀಯ ಸೇವೆ ನೀಡಲು 2019-20ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ರಾಜ್ಯಾದ್ಯಂತ 2 ಕೋಟಿ ರೂ. ವೆಚ್ಚದಲ್ಲಿ ಒಟ್ಟಾರೆ 15 “ಸುಸಜ್ಜಿತ ಪಶು ಚಿಕಿತ್ಸಾ ವಾಹನ” ನೀಡಲು ಮಂಜೂರಾತಿ ನೀಡಲಾಗಿದ್ದು, ಅದರಂತೆ ಕಲ್ಯಾಣ ಕರ್ನಾಟಕ ಬೀದರ, ಕಲಬುರಗಿ ಹಾಗೂ ರಾಯಚೂರು ಜಿಲ್ಲೆ ಒಳಗೊಂಡಂತೆ 15 ಜಿಲ್ಲೆಗಳಿಗೆ ಮೊದಲ ಹಂತದಲ್ಲಿ 15 ವಾಹನಗಳನ್ನು ನೀಡಲಾಗಿದೆ. ಮುಂದಿನ ದಿನದಲ್ಲಿ ಇತರೆ ಜಿಲ್ಲೆಗಳಿಗೂ ಅಂಬುಲೆನ್ಸ್ ವಾಹನ ನೀಡಲಾಗುವುದು ಎಂದರು.
ಸುಸಜ್ಜಿತ ಸಂಚಾರಿ ಪಶು ಶಸ್ತ್ರಚಿಕಿತ್ಸಾ ವಾಹನದಿಂದ ದನ, ಎಮ್ಮೆ, ಕುರಿ, ಮೇಕೆ, ಹಂದಿ, ಇನ್ನಿತರ ಜಾನುವಾರುಗಳಿಗೆ ತಜ್ಞ ಪಶುವೈದ್ಯರ ಮೂಲಕ ತುರ್ತು ಸೇವೆಯನ್ನು ನೀಡಲು ಸಹಕಾರಿಯಾಗಿದೆ ಎಂದ ಸಚಿವರು ಗೋ ಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯದಲಿಯ್ಲೂ ಜಾರಿಗೆ ತರಲು ಮುಖ್ಯಮಂತ್ರಿಗಳ ಜೊತೆಗೆ ಮಾತನಾಡುವುದಾಗಿ ಸಚಿವರು ತಿಳಿಸಿದರು.
ವಾಹನದಲ್ಲಿ ಏನೇನಿದೆ: ಆಧುನಿಕ ಪಶುವೈದ್ಯಕೀಯ ಶಸ್ತ್ರ ಚಿಕಿತ್ಸಾ ಘಟಕ, ಪ್ರಯೋಗ ಶಾಲೆ, ಸ್ಕ್ಯಾನಿಂಗ್ ಉಪಕರಣ ಆಳವಡಿಕೆಗಾಗಿ ಅವಕಾಶ, 250 ಲೀಟರ್ ಸಾಮಥ್ರ್ಯದ ನೀರಿನ ಟ್ಯಾಂಕ್, 200 ಕೆ.ಜಿ. ತೂಕ ಸಾಮಥ್ರ್ಯಧ ಶಸ್ತ್ರ ಚಿಕಿತ್ಸಾ ಟೇಬಲ್, ಎಲ್.ಇ.ಡಿ. ಲೈಟ್, ಆಮ್ಲಜನಕ ಸಪೋರ್ಟ್ ಸಿಸ್ಟಮ್ ಅಳವಡಿಕೆ, ಆಕಸ್ಮಿಕ ಬೆಂಕಿ ಅನಾಹುತ ನಿವಾರಣೆ, ಜಾನುವಾರುಗಳ ಚಿಕಿತ್ಸೆಗೆ ಅತ್ಯವಶ್ಯಕವಾಗಿರುವ ಶಸ್ತ್ರ ಚಿಕಿತ್ಸಾ ಉಪಕರಣ ಕಿಟ್, ಮರಣೋತ್ತರ ಪರೀಕ್ಷೆ ಉಪಕರಣಗಳ ಕಿಟ್, ಪ್ರಸೂತಿ ಕಿಟ್‍ಗಳ ಪೆಟ್ಟಿಗೆ ಇದೆ.
ಈ ಸಂದರ್ಭದಲ್ಲಿ ಸಂಸದ ಮತ್ತು ಬಿ.ಜೆ.ಪಿ. ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್, ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ, ವಿಧಾನಸಭೆಯ ಶಾಸಕರಾದ ಬಸವರಾಜ ಮತ್ತಿಮೂಡ, ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನ ಪರಿಷತ್ ಶಾಸಕ ಬಿ.ಜಿ. ಪಾಟೀಲ್, ಮಾಜಿ ಶಾಸಕರಾದ ಮಾಲೀಕಯ್ಯಾ ಗುತ್ತೇದಾರ, ಮಾಜಿ ಎಂ.ಎಲ್.ಸಿ. ಅಮರನಾಥ ಪಾಟೀಲ, ಜಿಲ್ಲಾ ಪಂಚಾಯತ್ ಸದಸ್ಯ ಶಿವರಾಜ ಪಾಟೀಲ ರದ್ದೆವಾಡಗಿ, ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕ ಡಾ.ವಿ.ಹೆಚ್.ಹನುಮಂತಪ್ಪ ಸೇರಿದಂತೆ ಇನ್ನಿತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…