ಕಲಬುರಗಿ: ದೇವಸ್ಥಾನದ ಕಟ್ಟೆಯ ಮೇಲೆ ತಮ್ಮ ಸರಿ ಸಮನಾಗಿ ಪರಿಶಿಷ್ಟ ಜಾತಿಯ ಯುವಕನೋರ್ವ ಕುಳಿತಿದ್ದಕ್ಕೆ ಆತನನ್ನು ಕೊಲೆ ಮಾಡಿದ ಘಟನೆಯನ್ನು ಶಾಸಕರಾದ ಪ್ರಿಯಾಂಕ್ ಖರ್ಗೆ ಖಂಡಿಸಿದ್ದಾರೆ.
ಈ ಕುರಿತು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಿಯಾಂಕ್ ಖರ್ಗೆ ಅವರು” ಈ ಘಟನೆ ಇಡೀ ಮಾನವ ಸಮಾಜವೇ ತಲೆ ತಗ್ಗಿಸುವಂತದ್ದು” ಎಂದು ಹೇಳಿದ್ದಾರೆ.
ಮಹಾನ್ ಮಾನವತವಾದಿ ಶ್ರೀ ಬಸವೇಶ್ವರರ ವಚನವೊಂದನ್ನು ಉಲ್ಲೇಖಿಸಿರುವ ಶಾಸಕರು, ಇಡೀ ಜಗತ್ತಿಗೆ ಸಮಾನತೆ ಹಾಗೂ ವಿಶ್ವ ಮಾನವ ಸಂದೇಶ ಸಾರಿದ ಬಸವಣ್ಣ ಹಾಗೂ ಕುವೆಂಪು ಜನ್ಮ ತಾಳಿದ ಈ ನಾಡಿನಲ್ಲಿ ಅಸ್ಪೃಶ್ಯತೆ ವಿಚಾರವಾಗಿ ನಡೆದ ಹತ್ಯೆ ಖಂಡನೀಯವಾದದು.
ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡುವಂತೆ ಸರಕಾರವನ್ನು ಅವರು ಒತ್ತಾಯಿಸಿದ್ದಾರೆ.
ಜಾತಿವಿಡಿದು ಸೂತಕವನರಸುವೆ
ಜ್ಯೋತಿವಿಡಿದು ಕತ್ತಲೆಯನರಸುವೆ
ಇದೇಕೋ ಮರುಳ ಮಾನವ? ಜಾತಿಯಲ್ಲಿ ಅಧಿಕನೆಂಬೆ.
ವಿಪ್ರ ಶತಕೋಟಿಗಳಿದ್ದಲ್ಲಿ ಫಲವೇನೋ?
ಭಕ್ತನೆ ಶಿಖಾಮಣಿ ಎಂದುದು ವಚನ.
ನಮ್ಮ ಕೂಡಲಸಂಗಮ ಶರಣರ ಪಾದಪರುಷವ ನಂಬು,
ಕೆಡಬೇಡ ಮಾನವ..
ಜಗಜ್ಯೋತಿ ಬಸವೇಶ್ವರ.
ಮನುಷ್ಯ ಮನುಷ್ಯರ ನಡುವಿನ ಜಾತಿಯಲ್ಲಿ ಮೇಲು- ಕೀಳು ಎನ್ನುವ ವ್ಯವಸ್ಥೆಗೆ ಈ ಮಾರ್ಮಿಕ ವಚನದ ಮೂಲಕವೇ ಪ್ರಿಯಾಂಕ್ ಖರ್ಗೆ ಅವರು ಉತ್ತರಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…