ಶಹಾಬಾದ:ಇತ್ತಿಚ್ಚಿಗಷ್ಟೇ ರಾಷ್ಟ್ರ ಪ್ರಶಸ್ತಿಗೆ ಭಾಜನರಾದ ಅಫಜಲಪೂರ ತಾಲೂಕಿನ ಬಂದರವಾಡ ಸರಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ಸುರೇಖಾ ಜಗನ್ನಾಥ ಡೆಂಗಿ ಅವರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೋ. ಬಿ. ಕೃಷ್ಣಪ್ಪ ಸ್ಥಾಪಿತ ಸಂಘಟನೆ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ದಸಂಸ ರಾಜ್ಯ ಸಮಿತಿ ಸದಸ್ಯ ಡಾ.ಮಲ್ಲೇಶಿ ಸಜ್ಜನ್ ಮಾತನಾಡಿ, ಕ್ರೀಯಾಶೀಲರಾಗಿ ಒಳ್ಳೆಯ ಕಾರ್ಯವನ್ನು ಮಾಡುತ್ತ ಹೋದರೆ ಪ್ರಶಸ್ತಿಗಳು ತಾನಾಗಿ ಅರಸಿ ಬರುತ್ತವೆ ಎಂಬುದಕ್ಕೆ ಶಿಕ್ಷಕಿ ಸುರೇಖಾ ಜಗನ್ನಾಥ ಡೆಂಗಿ ಅವರೇ ಸಾಕ್ಷಿ. ಬಹಳಷ್ಟು ಜನರು ಪ್ರಶಸ್ತಿಗಾಗಿ ಹಣಬಲ, ರಾಜಕೀಯ ಬಲವನ್ನು ಪ್ರಯೋಗ ಮಾಡಿ ಏನೆಲ್ಲಾ ಹರಸಾಹಸ ಮಾಡುತ್ತಾರೆ ಎಂಬುದು ಎಲ್ಲರಿಗೂ ಗೊತ್ತಿದ್ದ ವಿಷಯ. ಆದರೆ ಸುರೇಖಾ ಅವರ ಕಾರ್ಯ ನಿಷ್ಠೆಯನ್ನು ಕಂಡು ಸರಕಾರ ಪ್ರಶಸ್ತಿಯನ್ನು ನೀಡುತ್ತಿರುವುದು ಮತ್ತು ಕಲಬುರಗಿ ಜಿಲ್ಲೆಯವರಿಗೆ ಬಂದಿರುವುದು ಸಂತೋಷದ ವಿಷಯ ಎಂದು ಹೇಳಿದರು.
ಅಣದೂರಿನ ವರಜ್ಯೋತಿ ಭಂತೇಜಿ, ಜಿಲ್ಲಾ ಸಂಚಾಲಕ ಸುರೇಶ ಮೆಂಗನ,ವಿಭಾಗೀಯ ಸಂಚಾಲಕ ಶಿವಾನಂದ ಸಾವಳಗಿ, ಜಿಲ್ಲಾ ಸಂಘಟನಾ ಸಂಚಾಲಕರಾದ ಭರತ್ ಧನ್ನಾ, ಶಿವಪುತ್ರ ಹಾಗರಗಾ,ಡಾ.ಶಂಕರ ಕಿಲ್ಲೆದಾರ,ಬಸವರಾಜ ಅಷ್ಟಗಿ, ಸಿದ್ಧಾರೂಡ,ಶರಣು ಪೂಜಾರಿ, ರಾಜೇಶ ಯನಗುಂಟಿಕರ್,ಕಲ್ಯಾಣಕುಮಾರ ಗಟ್ಟು, ಡಾ.ಜಗನ್ನಾಥ ಡೆಂಗಿ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…