ಶಹಾಬಾದ:ಜನಸಂಘದಿಂದ ಬಿಜೆಪಿ ಪಕ್ಷವನ್ನು ಬೆಳೆಸುವಲ್ಲಿ ಅವಿರತವಾಗಿ ಶ್ರಮವಹಿಸಿದ್ದ ಹಿರಿಯ ಮುಖಂಡರನ್ನು ಜಿಲ್ಲಾ, ರಾಜ್ಯ ಬಿಜೆಪಿ ಮುಖಂಡರು ಸಂಪೂರ್ಣ ನಿರ್ಲಕ್ಷ್ಯ ವಹಿಸಿ, ಪಕ್ಷದ ಸಿದ್ಧಾಂತವನ್ನು ಬುಡಮೇಲು ಮಾಡುತ್ತಿದ್ದಾರೆ ಎಂದು ನಗರದ ಬಿಜೆಪಿ ಹಿರಿಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಈ ಕುರಿತು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಹಿರಿಯ ಮುಖಂಡ ಭೀಮರಾವ ಸಾಳುಂಕೆ, ಜಿಲ್ಲಾ ಮಟ್ಟದ ಪದಾಧಿಕಾರಿಗಳಲ್ಲಿ ನಗರದ ಇಬ್ಬರು ಮಹಿಳೆಯರಿಗೆ ಸ್ಥಾನಮಾನ ನೀಡಿರುವುದು ಸ್ವಾಗತಾರ್ಹ. ಆದರೆ ಸುಮಾರು ಎರಡು ದಶಕಗಳಿಗಿಂತಲೂ ಹೆಚ್ಚು ಸಮಯ ಪಕ್ಷದಲ್ಲಿ ದುಡಿದವರಿಗೆ ಯಾವ ಬೆಲೆ ಇಲ್ಲದಂತಾಗಿ ಮಾಡಲಾಗಿದ್ದು ಮಾತ್ರ ಅಸಮಾಧಾನಕ್ಕೆ ಕಾರಣವಾಗಿದೆ.
ಅಲ್ಲದೇ ನಗರದ ಹಿರಿಯ ಮುಖಂಡರನ್ನು ರಾಜ್ಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರಲ್ಲಿ ಗಣನೆಗೆ ತೆಗೆದುಕೊಳ್ಳದೆ ನಿರ್ಲಕ್ಷಿಸಲಾಗುತ್ತಿದೆ. ಒಂದು ಕಾಲದಲ್ಲಿ ಜಿಲ್ಲಾ ಮಟ್ಟದಲ್ಲಿ ಯಾವುದೇ ಕಾರ್ಯಕ್ರಮ ನಡೆಯುವ ಸಂದರ್ಭದಲ್ಲಿ ಜಿಲ್ಲಾ ಮುಖಂಡರು ಶಹಾಬಾದ ಕಾರ್ಯಕರ್ತರು ಬರುವ ದಾರಿಯನ್ನು ಕಾಯುತ್ತಿದ್ದರು. ಜನಸಂಘದಿಂದ ಪಕ್ಷ ಸಂಘಟಿಸಿ, ಎರಡು ಬಾರಿ ನಗರ ಸಭೆ ಅಧ್ಯಕ್ಷರಾಗಿದ್ದ ಶರಣಪ್ಪ ಹದನೂರ ಅವರನ್ನು ಪಕ್ಷ ಮೂಲೆಗುಂಪು ಮಾಡಿದೆ ಎಂದು ದೂರಿದರು.
ಸುನೀಲ ವಲ್ಯಾಪುರೆ, ರೇವುನಾಯಕ ಬೆಳಮಗಿ, ಈಗ ಬಸವರಾಜ ಮತ್ತಿಮಡು ಅವರು ಶಾಸಕರಾಗಿದ್ದರೂ, ವಾಡಿ-ಶಹಾಬಾದ ನಗರಾಭಿವೃದ್ದಿ ಪ್ರಾಧಿಕಾರ ಸೇರಿದಂತೆ ಯಾವುದೆ ಸ್ಥಳೀಯ, ಜಿಲ್ಲಾ, ರಾಜ್ಯ ಮಟ್ಟದ ಸಂಸ್ಥೆಗಳಿಗೆ ನಗರದ ಮುಖಂಡರನ್ನು ನಾಮನಿರ್ಧೇಶನ ಮಾಡಿಲ್ಲ. ಇಂದು ನಗರದಲ್ಲಿ ಒಂದೆರಡು ಬಾರಿ ಬಿಜೆಪಿ ಅಧ್ಯಕ್ಷರಾಗಿ, ಹಿಂದೆ ರಾಜ್ಯ, ಜಿಲ್ಲಾ ಸಮಿತಿಯಲ್ಲಿ ಕೆಲಸ ಮಾಡಿದವರನ್ನು ಕ್ಯಾರೆ ಎನ್ನುತ್ತಿಲ್ಲ. ಆದರೆ ಪಕ್ಷ ಹುಟ್ಟಿದ್ದಾಗಿನಿಂದ ದುಡಿದವರ ಕೂಗು ಮಾತ್ರ ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾಗಿದೆ.
ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಪಕ್ಷವನ್ನು ಬಿಟ್ಟು ಹೋಗಿ, ಮತ್ತೆ ಪಕ್ಷಕ್ಕೆ ಬಂದವರಿಗೆ ಆದ್ಯತೆ ನೀಡಲಾಗುತ್ತಿದೆ. ವಯಸ್ಸಿನ ನಿರ್ಭಂಧ ಹೇರಲಾಗುತ್ತದೆ. ಹಿರಿಯ ವಯಸ್ಸಿನವರು ಪಕ್ಷದಲ್ಲಿ ಕೆಲಸ ಮಾಡದೆ ಮನೆಯಲ್ಲಿ ಇರಿ ಎಂದು ಸ್ಪಷ್ಟಪಡಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪಕ್ಷದ ಸಿದ್ಧಾಂತವನ್ನು ಗಾಳಿಗೆ ತೂರಿ ಮನಸ್ಸಿಗೆ ಬಂದವರಿಗೆ ಸ್ಥಾನಮಾನ ನೀಡದೇ, ದುಡಿದವರಿಗೆ ನೀಡಬೇಕು.ಈ ನಿಟ್ಟಿನಲ್ಲಿ ಕೂಡಲೇ ಶಾಸಕರು, ಜಿಲ್ಲಾ ಮತ್ತು ರಾಜ್ಯ ಮುಖಂಡರು ಸೂಕ್ತ ನಿರ್ಧಾರ ತೆಗೆದುಕೊಂಡು ದುಡಿದವರಿಗೆ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಿದರು. ಪಕ್ಷದ ಮಾಜಿ ಅಧ್ಯಕ್ಷರಾದ ಕನಕಪ್ಪ ದಂಡಗುಲಕರ್, ಅನೀಲಕುಮಾರ ಬೊರಗಾಂವಕರ, ಚಂದ್ರಕಾಂತ ಗೊಬ್ಬುರಕರ, ಸುಭಾಷ ಜಾಪೂರ, ಡಾ.ಅಶೋಕ ಜಿಂಗಾಡೆ, ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…