ಕಲಬುರಗಿ: ರಿಕವರಿಗೆ ತೆರಳಿದ ಪೊಲೀಸ್ ರ ಮೇಲೆ ಶೂಟ್ ಔಟ್ ನಡೆದಿರುವ ಘಟನೆ ಇಂದು ಬೆಳ್ಳಂಬೆಳಿಗ್ಗೆ ಕಲಬುರಗಿ ವಿಶ್ವ ವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸ್ಟೇಶನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟೇಶನ್ ಬಜಾರ್ ಪೊಲೀಸ್ ನೇತೃತ್ವದ ತಂಡ ಆರೋಪಿಯಿಂದ ವೆಪನ್ ರಿಕವರಿಗೆ ತೆರಳಿದ ವೇಳೆ ಆರೋಪಿ ಅದೇ ಗನ್ನಿಂದ ಪೊಲೀಸರ ಮೇಲೆ ಶೂಟ್ ಮಾಡುತ್ತಿದ್ದ. ಈ ವೇಳೆಯಲ್ಲಿ ಪ್ರತ್ಯುತ್ತರವಾಗಿ ಆರೋಪಿಯ ಕಾಲ ಮೇಲೆ ಶೂಟ್ ಮಾಡಲಾಗಿದೆ.
ವಿದ್ಯಾ ನಗರ ನಿವಾಸಿ ಹಾಗೂ ಬಡಾವಣೆಯ ಪಾಲಿಕೆಯ ಸದಸ್ಯ ಸಂಬಂಧಿಯಾದ ರೌಡಿ ಶೀಟರ್ ಮಿರ್ಜಾ ಫಹಿಮ್ ಬೇಗ್ ಆರೋಪಿ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಇನ್ಸ್ಪೆಕ್ಟರ್ ಲಾಲಸಾಬ ಗೌಂಡಿ ಗುಂಡು ಹಾರಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಹೆಡ್ ಕಾನ್ಸ್ಸ್ಟೇಬಲ್ ಅಂಬಾದಾಸ ಮತ್ತು ಕಾನ್ಸ್ಟೇಬಲ್ ರಫೀಕ್ಗೆ ಗಾಯಗಳಾಗಿದ್ದು, ಅವರನ್ನು ಯುನೈಟೆಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಫಯೀಂನನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಘಟನಾ ಸ್ಥಳದಲ್ಲಿ ಒಂದು ಲಾಂಗ್ ಮಚ್ಚು ಮತ್ತು ಗುಂಡುಗಳು ಸ್ಥಳದಲ್ಲಿ ಲಭ್ಯವಾಗಿದೆ.
ಈ ಕುರಿತು ವಿವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…
ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…