ಸುರಪುರ: ತಾಲೂಕಿನಾದ್ಯಂತ ಇರುವ ಎಲ್ಲಾ 42 ಗ್ರಾಮ ಪಂಚಾಯತಿಗಳಲ್ಲಿ 14ನೇ ಹಣಕಾಸು ಯೋಜನೆಯಡಿ ಬಂದ ಅನುದಾನದಲ್ಲಿ ಅಭಿವೃಧ್ಧಿ ಕಾವiಗಾರಿಗಳನ್ನು ಮಾಡದೆ ಪಂಚಾಯತಿ ಅಭೀವೃಧ್ಧಿ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಸದಸ್ಯರು ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ.
ಆದ್ದರಿಂದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಾದ ಅನುದಾನ ದುರ್ಬಳಕೆಯ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಿ.ಜಿ.ಸಾಗರ ಬಣ) ಕಾರ್ಯಕರ್ತರು ತಾಲೂಕು ಪಂಚಾಯತಿ ಮುಂದೆ ಪ್ರತಿಭಟಿಸಿ ನಂತರ ಜಿಲ್ಲಾ ಪಂಚಾಯತಿ ಸಿಇಒ ಅವರಿಗೆ ಬರೆದ ಮನವಿಯನ್ನು ಗ್ರೇಡ-2 ತಹಸೀಲ್ದಾರ ಸೂಫಿಯಾ ಸುಲ್ತಾನ ಅವರ ಮೂಲಕ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘಟನೆ ಜಿಲ್ಲಾ ಸಂಚಾಲಕ ಶಿವಪುತ್ರ ಜವಳಿ ಸಂಘಟನಾ ಸಂಚಾಲಕ ಶಿವಲಿಂಗ ಹಸನಾಪುರ ಚಂದಪ್ಪ ಮುನೆಪ್ಪನೊರ ತಾಲೂಕು ಸಂಚಾಲಕ ವೀರಭದ್ರಪ್ಪ ದೊಡ್ಮನಿ ಹಣಮಂತ ರೋಜಾ ಬಾಲರಾಜ ಕಾಸಪುರ ಯಲ್ಲಾಲಿಂಗ ಹೊಸ್ಮನಿ ಮಲ್ಲಪ್ಪ ಪೂಜಾರಿ ದೇವು ಚಿಂಚೋಳಿ ಶೇಖರ ಮಂಗಳೂರ ಗೌತಮ ಬಡಿಗೇರ ಆಕಾಶ ಕಟ್ಟಿಮನಿ ಖಾಜಾ ಅಜ್ಮೀರ್ ಎಂ.ಪಟೇಲ್ ರಮೇಶ ಬಡಿಗೇರ ಮಹಾದೇವ ದೇವಾಪುರ ಪ್ರಕಾಶ ಮುಷ್ಠಳ್ಳಿ ರಮೇಶ ನಂಬಾ ರವಿಕುಮಾರ ದೊಡ್ಮನಿ ಭೀಮರಾಯ ಮಂಗಳೂರ ಕಲ್ಯಾಣ ಕುಮಾರ ಸಿದ್ದು ಚಿಂಚೋಳಿ ಇಬ್ರಾಹಿಂ ಖುರೇಶಿ ಮೈಬೂರ ಖುರೇಶಿ ಜಗದೀಶ ಕಂಬಾರ ಹಣಮಂತ್ರಾಯ ವಂದಗನೂರ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…