ಬಿಸಿ ಬಿಸಿ ಸುದ್ದಿ

ಧ್ಯಾನ್ಚಂದ್ ಅಪ್ಪಟ ದೇಶಭಕ್ತ, ಅಪ್ರತಿಮ ಹಾಕಿ ಆಟಗಾರ- ಅನಿಲ ಬೋರಗಾಂವಕರ್

ಶಹಾಬಾದ: ಧ್ಯಾನ್ಚಂದ್ ಅಪ್ಪಟ ದೇಶಭಕ್ತ, ಅಪ್ರತಿಮ ಹಾಕಿ ಆಟಗಾರ, ಸ್ವಾತಂತ್ರ್ಯ ಬರುವುದಕ್ಕಿಂತ ಮುಂಚೆಯೇ ಭಾರತಕ್ಕೆ ಒಲಿಂಪಿಕ್ಸ್ನಲ್ಲಿ ಮೂರು ಬಾರಿ ಅಂದರೆ ಹ್ಯಾಟ್ರಿಕ್ ಮೆಡಲ್ಗಳನ್ನು ತಂದು ಕೊಟ್ಟ ದೇಶ ಹೆಮ್ಮೆಯ ಪುತ್ರ ಎಂದು ರಾಷ್ಟ್ರಭಾಷಾ ಶಿಕ್ಷಣ ಸಮಿತಿಯ ಸದಸ್ಯ ಅನೀಲ ಬೋರಗಾಂವಕರ್ ಹೇಳಿದರು.

ಅವರು ಸೋಮವಾರ ನಗರದ ಎಸ್.ಜಿ.ವರ್ಮಾ ಹಿಂದಿ ಪ್ರೌಢಶಾಲೆಯಲ್ಲಿ ಆಯೋಜಿಸಲಾದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಕ್ರೀಡೆಗಳಲ್ಲಿ ಅತಿ ಹೆಚ್ಚಿನ ಆಸಕ್ತಿ ಹೊಂದಿದ ಧ್ಯಾನ್ಚಂದ್ ಭಾರತೀಯ ಸೈನ್ಯದಲ್ಲಿ ಒಳ್ಳೆಯ ಹಾಕಿ ಆಡುವ ಶೈಲಿಯನ್ನು ಗಮನಿಸಿ ಅವರನ್ನು ಭಾರತೀಯ ಹಾಕಿ ತಂಡಕ್ಕೆ ಆಯ್ಕೆ ಮಾಡಿಕೊಂಡರು. ನೆದರ್ಲ್ಯಾಂಡ, ಅಮೇರಿಕಾ ಹಾಗೂ ಜರ್ಮನಿಯಲ್ಲಿ ನಡೆದ ಮೂರು ಒಲಿಂಪಿಕ್ಸ್ಗಳಲ್ಲಿ ಭಾರತಕ್ಕೆ ಹ್ಯಾಟ್ರಿಕ್ ಗೋಲ್ಡ್ ಮೆಡಲ್ಗಳನ್ನು ತಂದು ಕೊಡುವುದರಲ್ಲಿ ಮುಖ್ಯ ಪಾತ್ರವಹಿಸಿದ್ದರು ಎಂದು ಹೇಳಿದರು.

ಕಲಬುರಗಿ ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಚನ್ನಬಸಪ್ಪ ಕೊಲ್ಲೂರ್ ಮಾತನಾಡಿ, ಮೇಜರ್ ಧ್ಯಾನ್ಚಂದ್ರ ಜನ್ಮದಿನವಾದ ಆಗಸ್ಟ್ 29ನ್ನು ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನಾಗಿ ಆಚರಿಸುತ್ತಿದ್ದೆವೆ. ಜರ್ಮನಿಯ ಬರ್ಲಿನನಲ್ಲಿ ಭಾರತ ಹಾಗೂ ಜರ್ಮನಿಯ ನಡುವೆ ನಡೆದ ಹಣಾಹಣಿಯಲ್ಲಿ ಭಾರತ 8-1 ಅಂತರದಿಂದ ಗೆದ್ದು ಚಿನ್ನದ ಪದಕ ಗೆದ್ದು, ಅದರಲ್ಲಿ 6 ಗೋಲುಗಳು ಧ್ಯಾನ್ಚಂದ್ ಅವರದಾಗಿತ್ತು.ಇವರ ಆಟದ ವೈಖರಿ, ಶೈಲಿಯನ್ನು ಕಂಡ ಹಿಟ್ಲರ್ ಅವರನ್ನು ಕರೆಯಿಸಿ ನೀವು ಜರ್ಮನಿಗೆ ಬಂದು ಬಿಡಿ ನಿಮ್ಮನ್ನು ನಮ್ಮ ಸೇನೆಯ ಸರ್ವೋಚ್ಚ ನಾಯಕ ಮಾಡುತ್ತೆನೆ ಎಂದು ಹೇಳಿದಾಗ ಭಾರತ ನನ್ನ ದೇಶ,ಅಲ್ಲಿ ನಾನು ಚೆನ್ನಾಗಿದ್ದೆನೆ ಎಂದು ಅಪ್ಪಟ ದೇಶಪ್ರೇಮಿಯಾಗಿ ಹೊರಹೊಮ್ಮಿದ ಅಪ್ರತಿಮ ಆಟಗಾರ ಮೇಜರ್ ಧ್ಯಾನ್ಚಂದ್ ಎಂದು ಹೇಳಿದರು.

ಎಸ್.ಜಿ.ವರ್ಮಾ ಹಿಂದಿ ಪ್ರಾಥಮಿಕ ಶಾಲೆಯ ಮುಖ್ಯಗುರುಮಾತೆ ಅನಿತಾ ಶರ್ಮಾ, ಬಾಬಾ ಸಾಹೇಬ ಸಾಳುಂಕೆ, ಸಾಬಣ್ಣ, ಸೌರಭ, ಮಹೇಶ್ವರಿ ಗುಳಿಗಿ, ಶ್ರೀರಾಮ ಚವ್ಹಾಣ ಇತರರು ಇದ್ದರು.

emedia line

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

4 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

14 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

14 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

14 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago