ಬಿಸಿ ಬಿಸಿ ಸುದ್ದಿ

ಕೇಂದ್ರದ ಜನವಿರೋಧಿ ನೀತಿ ವಿರೋಧಿಸಿ ಭಾರತ ಕಮ್ಯುನಿಸ್ಟ ಪಕ್ಷದಿಂದ ಪ್ರತಿಭಟನೆ

ಶಹಾಬಾದ:ಕೇಂದ್ರದ ಜನವಿರೋಧಿ ನೀತಿಗಳನ್ನು ವಿರೋಧಿಸಿ ಶನಿವಾರ ಭಾರತ ಕಮ್ಯುನಿಸ್ಟ ಪಕ್ಷ (ಮಾರ್ಕ್ಸವಾದಿ) ತಾಲೂಕಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಕರ್ನಾಟಕ  ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಅಶೋಕ ಮ್ಯಾಗೇರಿ ಮಾತನಾಡಿ, ಕೇಂದ್ರ ಸರಕಾರ ರಾಷ್ಟ್ರೀಯ ಉದ್ಯಮಗಳನ್ನು ಖಾಸಗೀಕರಣಗೊಳಿಸಲು ಹೊರಟಿದೆ.ಬ್ರಿಟಿಷರಿಂದ ಹೋರಾಟ ಮಾಡಿ ಪಡೆದಂತಹ ಕಾಯ್ದೆಗಳನ್ನು ನಮ್ಮನ್ನು ಆಳುತ್ತಿರುವ ಕೇಂದ್ರ ಸರಕಾರ ಕಳೆಯುತ್ತಿದೆ.ರೈತ ಕಾರ್ಮಿಕರ ಹಾಗೂ ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ.ರೈತರನ್ನು, ಕಾರ್ಮಿಕರನ್ನು ಬೀದಿಪಾಲು ಮಾಡುತ್ತಿದ್ದಾರೆ.ಕಾರ್ಮಿಕರ ಹಕ್ಕುಗಳನ್ನು ಕೇಳಿದರೆ ದೇಶ ವಿರೋಧಿ ಪಟ್ಟ ಕಟ್ಟುತ್ತಿದ್ದು, ಇದನ್ನು ಎಲ್ಲರೂ ವಿರೋಧಿಸಬೇಕೆಂದು ಎಂದರು.
ಬಂಡವಾಳಶಾಹಿ ಪರವಾಗಿ ಮಾಡಿರುವ ಕಾಯ್ದೆ ತಿದ್ದುಪಡಿ, ರೇಲ್ವೆ, ವಿದ್ಯುತ್ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ, ಕಾಮರ್ಿಕ ಕಾಯ್ದೆ, ಭೂಸುಧಾರಣಾ ಕಾಯ್ದೆ,ಎಪಿಎಂಸಿ ಕಾಯ್ದೆ, ಭೂ ಕಂದಾಯ ಕಾಯ್ದೆ ತಿದ್ದುಪಡಿ ಕಾಯ್ದೆಗಳನ್ನು ಕೈಬಿಡಬೇಕೆಂದು ಆಗ್ರಹಿಸಿದಲ್ಲದೇ, ಅತಿವೃಷ್ಟಿಯಿಂದ ಹಾನಿಯಾದ ಹೆಸರು,ಉದ್ದು ಹಾಗೂ ತೊಗರಿ ಬೆಳೆಗಳಿಗೆ ಪರಿಹಾರ ನೀಡಬೇಕು, ಹೆಸರು ಖರೀದಿ ಕೇಂದ್ರ ತೆರೆಯಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.
ರಾಯಪ್ಪ ಹುರಮುಂಜಿ, ಸಂಪತ್ತಕುಮಾರಿ ರಾಯಚೂರಕರ್,ಸುನೀತಾ ಕೋರೆ,ಶಭಾನಾ ಬೇಗಂ, ಶಿವಲೀಲಾ ನರಬೋಳಿ, ಭೀಮಶಾ ಗೋಳಾ ಇತರರು ಇದ್ದರು.

emedia line

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

22 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago